ಕೋಲ್ಕತ:ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಪಶ್ಚಿಮ ಬಂಗಾಳದ ಕೋಲ್ಕತದಲ್ಲಿ ನಡೆದ ಸಮಾವೇಶವು ಹೈಡ್ರಾಮಕ್ಕೆ ಸಾಕ್ಷಿಯಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಕೈಲಾಶ್​ ವಿಜಯವರ್ಗೀಯ ಮತ್ತು ಮುಕುಲ್​ ರಾಯ್​ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರುಗಳನ್ನು ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ.
ದಕ್ಷಿಣ ಕೋಲ್ಕತದ ತೊಲಿಗುಂಗೆ ಏರಿಯಾದಲ್ಲಿ ಸಿಎಎ ಪರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ, ಸಮಾವೇಶ ನಡೆಸಲು ಅನುಮತಿಯನ್ನು ಪಡೆದಿಲ್ಲ ಎಂಬ ಕಾರಣಕ್ಕೆ ಬಿಜೆಪಿ ನಾಯಕರುಗಳನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸರ ಅನುಮತಿ ಇಲ್ಲದೆ ಮೆರವಣಿಗೆ ನಡೆಸಲೂ ಬಿಜೆಪಿ ನಾಯಕರು ತಯಾರಿ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ ಅವರನ್ನು ವ್ಯಾನ್​ನಲ್ಲಿ ತುಂಬಿಕೊಂಡು ಪೊಲೀಸರು ಕರೆದೊಯ್ದಿದ್ದಾರೆ. ಇದರಿಂದ ಸಮಾವೇಶ ಸ್ಥಳದಲ್ಲಿ ಕೆಲಕಾಲ ಹೈಡ್ರಾಮವೇ ನಡೆದಿದೆ.
ಸಿಎಎ ಸದ್ಯ ದೇಶದೆಲ್ಲೆಡೆ ಸದ್ದು ಮಾಡುತ್ತಿರುವ ವಿಚಾರವಾಗಿದ್ದು, ಬಿಜೆಪಿ ವಿರುದ್ಧ ಸದಾ ವಾಗ್ದಾಳಿ ನಡೆಸುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಸಿಎಎ ಜಾರಿಯಾಗಲು ಬಿಡುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. ಅಲ್ಲದೆ, ಬಂಗಾಳ ಸದನದಲ್ಲಿ ಸಿಎಎ ವಿರೋಧಿ ನಿರ್ಣಯವನ್ನು ತೆಗದುಕೊಂಡಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಾಯ್ದೆಯನ್ನು ಬಲವಂತವಾಗಿ ಅನುಷ್ಠಾನಕ್ಕೆ ತರುವ ಮೂಲಕ ಕೋಮು ಸೌಹಾರ್ದತೆಯನ್ನು ಕದಡಿದೆ ಎಂದು ಆರೋಪಿಸಿದ್ದಾರೆ.(ಏಜೆನ್ಸೀಸ್​)
Kolkata: Police detains BJP national general secretary Kailash Vijayvargiya at the start point of BJP's rally in Tollygunge Phari supporting the Citizenship Amendment Act.pic.twitter.com/NVEU9f1TCp
— ANI (@ANI)February 7, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + ten =
Remember me
