ಕೋಲ್ಕತ್ತಾ:ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯ ಕುರಿತು ಕೇಂದ್ರೀಯ ತನಿಖಾ ದಳ ತನಿಖೆಗೆ ಕಲ್ಕತ್ತಾ ಹೈಕೋರ್ಟ್​ ಮಂಗಳವಾರ ಆದೇಶಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ಇದನ್ನೂ ಓದಿ:ಆಗಸ್ಟ್​ 13ರಿಂದ 15ರವರೆಗೆ ಪೀಣ್ಯ ಇಂಡಸ್ಟ್ರೀ-ನಾಗಸಂದ್ರ ನಡುವೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಮತ್ತು ಅಸಹಜ ಸಾವಿನ ಪ್ರಕರಣವನ್ನು ಏಕೆ ಪ್ರಾರಂಭಿಸಲಾಯಿತು ಎಂದು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ ಎಸ್ ಶಿವಜ್ಞಾನಂ ಅವರು ಪಶ್ಚಿಮ ಬಂಗಾಳ ಸರ್ಕಾರದ ವಕೀಲರನ್ನು ಪ್ರಶ್ನಿಸಿದ ನಂತರ ಸಿಬಿಐ ತನಿಖೆಯ ಆದೇಶ ಬಂದಿದೆ.
#WATCH| Calcutta High Court ordered a CBI investigation into RG Kar Medical College and Hospital rape-murder incident.
Advocate Koustav Bagchi says, "We are very much happy. We had prayed to the court that there should be a CBI investigation and it should be monitored by the…pic.twitter.com/2ltFEZvvpq
— ANI (@ANI)August 13, 2024

ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಕುರಿತು ಸಿಬಿಐ ತನಿಖೆಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಮತ್ತು ಕೂಡಲೇ ಎಲ್ಲಾ ದಾಖಲೆಗಳನ್ನು ಬುಧವಾರ ಬೆಳಗ್ಗೆ 10 ಗಂಟೆಯೊಳಗೆ ಸಿಬಿಐಗೆ ಹತ್ತಾಂತರಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೆ ಮುಷ್ಕರ ಕೈಬಿಡುವಂತೆ ವೈದ್ಯರಿಗೆ ಸೂಚಿಸಿದೆ.
31 ವರ್ಷದ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ತನಿಖಾ ಪ್ರಗತಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಲ್ಕತ್ತಾ ಹೈಕೋರ್ಟ್, ರಸ್ತೆಬದಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿಲ್ಲ. ಆಸ್ಪತ್ರೆಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಆಸ್ಪತ್ರೆಯ ಅಧೀಕ್ಷಕರು ಅಥವಾ ಪ್ರಾಂಶುಪಾಲರು ದೂರು ಸಲ್ಲಿಸಬಹುದಿತ್ತು ಎಂದು ಹೇಳಿದೆ.
ಆಗಸ್ಟ್ 9 ರಂದು ಬೆಳಿಗ್ಗೆ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ ವೈದ್ಯೆಯ ಶವ ಪತ್ತೆಯಾಗಿದೆ. ಮರುದಿನ ಈ ಪ್ರಕರಣದಲ್ಲಿ ಸಂಜಯ್ ರಾಯ್ ಎಂಬ ನಾಗರಿಕ ಸ್ವಯಂಸೇವಕನನ್ನು ಬಂಧಿಸಲಾಯಿತು. ಸಂತ್ರಸ್ತ ಮಹಿಳೆಯ ನಾಲ್ಕು ಪುಟಗಳ ಶವಪರೀಕ್ಷೆ ವರದಿಯು ಮಹಿಳೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವಾಗಿದ್ದು, ಆಕೆಯ ದೇಹದ ಇತರ ಭಾಗಗಳಲ್ಲಿ ಗಾಯದ ಗುರುತುಗಳಿವೆ ಎಂದು ತಿಳಿದುಬಂದಿದೆ.
ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಮೃತ ಸ್ನಾತಕೋತ್ತರ ವಿದ್ಯಾರ್ಥಿನಿಯ ಪೋಷಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಜಾರ್ಖಂಡ್‌: 3 ವರ್ಷದ ಬಾಲಕಿ ಮೇಲೆ ಸ್ಕೂಲ್ ವ್ಯಾನ್ ಚಾಲಕನಿಂದ ಅತ್ಯಾಚಾರ! ಪೋಕ್ಸೊ ಪ್ರಕರಣ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 11 =
Remember me
