ಕೊಯಿಕ್ಕೋಡ್​:ಕೇರಳದ ಪೊಲೀಸ್ ಅಧಿಕಾರಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಉಳ್ಳಿಯೇರಿಯಲ್ಲಿರುವ ಅವರ​ ನಿವಾಸದಲ್ಲಿ ಪತ್ತೆಯಾಗಿದೆ. ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಮೃತ ಹಿರಿಯ ಪೊಲೀಸ್​ ಅಧಿಕಾರಿಯನ್ನು ಬಾಜು ಎಂದು ಗುರುತಿಸಲಾಗಿದೆ. ಇವರು ಕೇರಳದ ಎಳತ್ತೂರು ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ಉಳ್ಳಿಯೇರಿಯಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಶನಿವಾರ ರಾತ್ರಿ ಬಾಜು ಸಂಬಂಧಿಕರು ಕೂಡಲೇ ಬಾಜು ಅವರನ್ನು ಉಳ್ಳಿಯೇರಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ. ಕೊಯಿಕ್ಕೋಡ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ವೈಯಕ್ತಿಕ ಕಾರಣಗಳಿಂದ ದುಡುಕಿನ ನಿರ್ಧಾರವನ್ನು ತೆಗೆದುಕೊಂಡಿರಬಹುದು ಎಂದು ಹೇಳಲಾಗಿದೆ. ಆದರೆ, ಕಾರಣ ಇನ್ನೂ ನಿಗೂಢವಾಗಿದೆ.(ಏಜೆನ್ಸೀಸ್​)
ನಂಬರ್​ಪ್ಲೇಟ್ ಗೋಲ್ಮಾಲ್: ನಕಲಿ ಕಂಪನಿಗಳಿಂದ ಎಚ್​ಎಸ್​ಆರ್​ಪಿ ದಂಧೆ; ಹಳೇ ವಾಹನಗಳಿಗೆ ಕಡ್ಡಾಯವಲ್ಲ..

ಕೋವಿಡ್ ಏರುಗತಿ ತಡೆಗೆ ಸಜ್ಜಾಗುತ್ತಿವೆ ಆಸ್ಪತ್ರೆಗಳು; ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಹಾಸಿಗೆ ಮೀಸಲು..

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಪಂಚಪ್ರಾಣ ಸಂಕಲ್ಪಕ್ಕೆ ಕರೆ, ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 6 =
Remember me
