ತಿರುವನಂತಪುರಂ:ದೇಶದ ಅತಿ ಕಿರಿಯ ಮೇಯರ್ ಹಾಗೂ ರಾಜ್ಯದ ಅತಿ ಕಿರಿಯ ಶಾಸಕನೆಂಬ ಹೆಗ್ಗಳಿಕೆ ಪಾತ್ರರಾಗಿರುವ ಮೇಯರ್​ ಆರ್ಯ ರಾಜೇಂದ್ರನ್​ ಮತ್ತು ಆಕೆಯ ಪತಿ ಸಚಿನ್​ ದೇವ್​ ವಿರುದ್ಧ ಪ್ರಕರಣ ದಾಖಲಿಸುವಂತೆ ತಿರುವನಂತಪುರಂ ಫಸ್ಟ್​ ಕ್ಲಾಸ್​ ಜೂಡಿಷಿಯಲ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ ಆದೇಶಿಸಿದೆ.​
ಕೆಎಸ್‌ಆರ್‌ಟಿಸಿ ಚಾಲಕ ಯದು ದೂರಿನ ಮೇರೆಗೆ ಪ್ರಕರಣ ದಾಖಲಿಸುವಂತೆ ಕಂಟೋನ್ಮೆಂಟ್ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
ಮೇಯರ್ ಆರ್ಯ ರಾಜೇಂದ್ರನ್ ಮತ್ತು ಮೇಯರ್ ಪತಿ ಹಾಗೂ ಶಾಸಕ ಕೆ.ಎಂ.ಸಚಿನ್ ದೇವ್, ಮೇಯರ್ ಸಹೋದರ ಅರವಿಂದ್, ಅವರ ಪತ್ನಿ ಆರ್ಯ ವಿರುದ್ಧ ಪ್ರಕರಣ ದಾಖಲಿಸುವಂತೆ ಕೆಎಸ್​ಆರ್​ಟಸಿ ಚಾಲಕ ಯದು ಮನವಿ ಮಾಡಿದ್ದರು. ಅಪರಾಧ ಎಸಗಲು ಬಸ್ಸಿನಲ್ಲಿ ಅತಿಕ್ರಮ ಪ್ರವೇಶ, ಅಕ್ರಮ ಬಂಧನ, ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು, ಸಾಕ್ಷ್ಯ ನಾಶಪಡಿಸುವುದು ಇತ್ಯಾದಿ ಆರೋಪಗಳನ್ನು ಹೊರಿಸಬೇಕು ಎಂದು ಯದು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು. ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ ಕಾರಣ ಯದು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ನ್ಯಾಯಾಲಯ ಪ್ರಕರಣ ದಾಖಲಿಸಲು ಆದೇಶ ಹೊರಡಿಸಿದೆ.
ಇದರ ಬೆನ್ನಲ್ಲೇ ಕಂಟೋನ್ಮೆಂಟ್ ಪೊಲೀಸರು ಮೇಯರ್, ಆಕೆಯ ಪತಿ ಮತ್ತು ಅವರೊಂದಿಗಿದ್ದ ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ ಅನ್ನು ನಡುರಸ್ತೆಯಲ್ಲಿ ನಿಲ್ಲಿಸಿ, ಸರ್ಕಾರಿ ಅಧಿಕಾರಿಯ ಅಧಿಕೃತ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಲಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ನ್ಯಾಯಾಲಯದ ಸೂಚನೆ ನೀಡಿದ ಬೆನ್ನಲ್ಲೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಏನಿದು ಪ್ರಕರಣ?ಕಳೆದ ವಾರ ಆರ್ಯ ರಾಜೇಂದ್ರನ್​ ದಂಪತಿ ತಮ್ಮ ಖಾಸಗಿ ವಾಹನದ ಮೂಲಕ ಕೆಸ್​ಆರ್​ಟಿಸಿ ಬಸ್​ ಓವರ್​ಟೇಕ್​ ಮಾಡುವಾಗ ಚಾಲಕ ಯದು ಕೆಟ್ಟದಾಗಿ ಸನ್ನೆ ಮಾಡುವ ಮೂಲಕ ಅಸಭ್ಯವಾಗಿ ವರ್ತಿಸಿದ ಎಂದು ಆರೋಪ ಮಾಡಿದರು. ಇದೇ ವಿಚಾರಕ್ಕೆ ಸ್ಥಳದಲ್ಲಿ ವಾಗ್ವಾದ ಸಹ ನಡೆಯಿತು. ಈ ಘಟನೆಯ ಬಗ್ಗೆ ಮಾತನಾಡಿರುವ ಆರ್ಯ, ಇದು ಬಸ್​ ಅನ್ನು ಓವರ್​ಟೇಕ್​ ಮಾಡುವ ವಿಚಾರ ಮಾತ್ರವಲ್ಲ, ಮಹಿಳೆಯರ ಕಡೆಗೆ ಬಸ್​ ಚಾಲಕನೊಬ್ಬ ಅಸಭ್ಯವಾಗಿ ವರ್ತಿಸಿದ್ದನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದರು. ನನ್ನ ಸೋದರ ಸಂಬಂಧಿಯ ಮದುವೆ ಇತ್ತು. ಸಮಾರಂಭ ಮುಗಿಸಿ ಕುಟುಂಬ ಸಮೇತ ಮನೆಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ನಮ್ಮ ಕಾರಿಗೆ ಡಿಕ್ಕಿ ಹೊಡೆದಿದೆ. ಆದರೆ ನಾವು ಅದನ್ನು ನಿರ್ಲಕ್ಷಿಸಿದ್ದೇವೆ. ಆದರೆ ಚಾಲಕ ನಮಗೆ ದಾರಿ ನೀಡಲು ನಿರಾಕರಿಸಿದನು. ಕೊನೆಗೆ ನಾವು ಆತನನ್ನು ಹಿಂದಿಕ್ಕಿ, ಓವರ್​ಟೇಕ್​ ಮಾಡುವಾಗ ಚಾಲಕ ಅಶ್ಲೀಲ ಸನ್ನೆಗಳನ್ನು ಮಾಡುವುದನ್ನು ನಾನು ಮತ್ತು ನನ್ನ ಅತ್ತಿಗೆ ಗಮನಿಸಿದೆವು. ಬಳಿಕ ಚಾಲಕನನ್ನು ಪಾಳಯಂ ಸಫಲ್ಯಂ ಕಾಂಪ್ಲೆಕ್ಸ್‌ನ ಮುಂದೆ ತಡೆದು ನಿಲ್ಲಿಸಿದೆವು ಎಂದು ಆರ್ಯ ತಿಳಿಸಿದರು.
ಈ ವೇಳೆ ಚಾಲಕನ ಪ್ರತಿಕ್ರಿಯೆ ದಿಗಿಲು ಹುಟ್ಟಿಸುವಂತಿತ್ತು. ಚಾಲಕ ನನ್ನ ಹಾಗೂ ನನ್ನ ಸಹೋದರನೊಂದಿಗೆ ಅಸಭ್ಯವಾಗಿ ಮಾತನಾಡಿದ್ದಾರೆ. ಅವರ ಅಶಿಸ್ತಿನ ವರ್ತನೆಯನ್ನು ಸಾಕ್ಷಿಗಳ ಮೂಲಕ ರುಜುವಾತುಪಡಿಸಬಹುದು. ಹೆಚ್ಚಿನ ದುರ್ನಡತೆಯನ್ನು ಗಮನಿಸಿದ ನಂತರ ನಾನು ಸಾರಿಗೆ ಸಚಿವ ಕೆ.ಬಿ.ಗಣೇಶ್ ಕುಮಾರ್ ಅವರನ್ನು ಸಂಪರ್ಕಿಸಿದೆ. ಜಾಗೃತ ದಳ ಮತ್ತು ಕಂಟೋನ್ಮೆಂಟ್ ಪೊಲೀಸರು ಸ್ಥಳಕ್ಕೆ ಬಂದರು. ಅಧಿಕಾರಿಗಳು ಮಧ್ಯಪ್ರವೇಶಿಸಿದ ನಂತರ ಚಾಲಕ ಕ್ಷಮೆಯಾಚಿಸಿದರೂ, ನಾನು ಅದನ್ನು ಸ್ವೀಕರಿಸಲು ನಿರಾಕರಿಸಿದೆ. ಇದು ನನ್ನ ಬಗ್ಗೆ ಮಾತ್ರವಲ್ಲ, ಮಹಿಳೆಯರು ಅನುಭವಿಸುವ ಅವಮಾನಕ್ಕೆ ಸಂಬಂಧಿಸಿದ್ದಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಚಾಲಕ ಯದು, ಘಟನೆಯ ಬಗ್ಗೆ ತಮ್ಮ ಹೇಳಿಕೆಯನ್ನು ನೀಡಿದರು. ಮೇಯರ್ ಮತ್ತು ಅವರ ಸಹಚರರು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರತಿಪಾದಿಸಿದರು. ಯಧು ಪ್ರಕಾರ, ಮೇಯರ್ ವಾಹನವು ಪ್ಲಾಮೂಡ್ ಮತ್ತು ಪಿಎಂಜಿ ನಡುವಿನ ಏಕಮುಖ ರಸ್ತೆಯಲ್ಲಿ ಎಡಭಾಗದಿಂದ ಬಸ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿತು. ತಿರುವನಂತಪುರಂ ಮೇಯರ್ ಮತ್ತು ಎಂಎಲ್ಎ ಎಂಬುದು ಗೊತ್ತಿಲ್ಲದೆ ನಾನು ಅವರೊಂದಿಗೆ ವಾಗ್ವಾದ ನಡೆಸಿದ್ದೇನೆ. ತ್ರಿಶೂರ್-ಆಲಪ್ಪುಳ-ತಿರುವನಂತಪುರ ಮಾರ್ಗದ ಬಸ್ ಇದಾಗಿದೆ. ನಾನು ಈಗಾಗಲೇ ಎರಡು ವಾಹನಗಳಿಗೆ ಓವರ್‌ಟೇಕ್ ಮಾಡಲು ಅವಕಾಶ ನೀಡಿದ್ದೆ. ಮೇಯರ್ ಕಾರು ಮೂರನೆಯದು. ಪ್ಲಾಮೂಡ್ ಮತ್ತು ಪಿಎಂಜಿ ನಡುವಿನ ಏಕಮುಖ ಮಾರ್ಗದಲ್ಲಿ ಕಾರನ್ನು ಓವರ್‌ಟೇಕ್ ಮಾಡಲು ಅವಕಾಶವಿರಲಿಲ್ಲ. ಹೀಗಿದ್ದರೂ, ಕಾರು ಬಸ್ಸಿನ ಮುಂದೆ ನಿಂತಿತು. ನಾನು ಅವರ ಅಗೌರವದ ವರ್ತನೆಗೆ ಪ್ರತಿಕ್ರಿಯಿಸಲಿಲ್ಲ. ಅಲ್ಲಿಯವರೆಗೆ ಅವರು ಯಾರೆಂಬುದು ಸಹ ನನಗೆ ತಿಳಿದಿರಲಿಲ್ಲ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ನನ್ನ ತಪ್ಪು ಕಂಡು ಬಂದರೆ ಕ್ರಮ ಕೈಗೊಳ್ಳಬಹುದು ಎಂದು ಯದು ಹೇಳಿದ್ದರು.(ಏಜೆನ್ಸೀಸ್​)
ಕೊಹ್ಲಿ ವಿಚಾರದಲ್ಲಿ ಕೊನೆಗೂ ಸತ್ಯ ಒಪ್ಪಿಕೊಂಡ ಬಾಬರ್​ ಅಜಮ್​: ಪಾಕ್​ ಕ್ರೀಡಾಭಿಮಾನಿಗಳಿಗೆ ಮುಖಭಂಗ

ನಾಡಿನ ಮಹಿಳೆಯರಿಗೆ ಪತ್ರ ಬರೆದು ವಿಶೇಷ ಮನವಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + seven =
Remember me
