ಕುಂದಾಪುರ:ಈ ಬಾರಿಯ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ರಾಜ್ಯಕ್ಕೆ ಮೊದಲ ಪದಕ ಲಭಿಸಿದೆ. ಕುಂದಾಪುರದ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದಿದ್ದು, ಇದು ಭಾರತಕ್ಕೆ ಲಭಿಸಿದ ಎರಡನೇ ಪದಕ.
ವೇಟ್‌ಲಿಫ್ಟಿಂಗ್ 61 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿರುವ ಗುರುರಾಜ್ ಶನಿವಾರ ನಡೆದ ಪಂದ್ಯದಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇದಕ್ಕೂ ಮೊದಲು ಭಾರತದ ಇನ್ನೋರ್ವ ಸ್ಪರ್ಧಿ ಸಂಕೇತ್ ಸಾಗರ್ 55 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದು, ಇದು ಈ ಬಾರಿಯ ಗೇಮ್ಸ್‌ನಲ್ಲಿ ಭಾರತಕ್ಕೆ ದಕ್ಕಿರುವ ಪ್ರಥಮ ಪದಕ.
61 ಕೆ.ಜಿ. ವಿಭಾಗದಲ್ಲಿ ಮಲೇಷಿಯಾದ ಮಹಮ್ಮದ್ ಅಜ್ನಿಲ್ ಬಿಡಿನ್ ಚಿನ್ನದ ಪದಕ ಗೆದ್ದರೆ, ಪಪುವ ನ್ಯೂಗಿನಿ ದೇಶದ ಮೊರಿಯಾ ಬಾರು ಬೆಳ್ಳಿ ಪದಕ ಪಡೆದರು. ಮೂರನೇ ಸ್ಥಾನದಲ್ಲಿ ಗುರುರಾಜ್ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ.
ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ಟ್ಯಾಕ್ಸಿ ಚಾಲಕ ಮಹಾಬಲ ಪೂಜಾರಿ- ಪದ್ದು ಪೂಜಾರಿ ದಂಪತಿ ಪುತ್ರ ಗುರುರಾಜ್ ಕಳೆದ ಬಾರಿ ಆಸ್ಟ್ರೇಲಿಯಾ ಗೋಲ್ಡ್ ಕೋಸ್ಟ್‌ನಲ್ಲಿ ನಡೆದ 21ನೇ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿಪದಕ ಗೆದ್ದಿದ್ದರು. ಆಗ ಅವರು 56 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ್ದರು. ಈ ಬಾರಿ 61 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ್ದಾರೆ. ವಾಯುಸೇನೆ ಉದ್ಯೋಗಿಯಾಗಿರುವ ಅವರು, ಎರಡನೇ ಬಾರಿಯ ಗೇಮ್ಸ್‌ಗೆ ಪಟಿಯಾಲದಲ್ಲಿ ಒಂದು ವರ್ಷದಿಂದ ಸಿದ್ಧತೆ ನಡೆಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 6 =
Remember me
