ನವದೆಹಲಿ:ವಾಸ್ತವ ಗಡಿರೇಖೆಯ ಬಳಿಕ ಚೀನಾದೊಂದಿಗಿನ ಜಟಾಪಟಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತ ಆ ಭಾಗದಲ್ಲಿನ ರಸ್ತೆಗಳ ಅಭಿವೃದ್ಧಿ ಕಾಮಗಾರಿಯನ್ನು ಚುರುಕುಗೊಳಿಸಲು ನಿರ್ಧರಿಸಿದೆ.
ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಹಾಲಿ ಜಾರಿಯಲ್ಲಿರುವ 20 ಸಾವಿರ ಕೋಟಿ ರೂ. ಮೌಲ್ಯದ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದ್ದಾರೆ. ಡರ್ಬುಕ್​-ಶಿಯಾಕ್​-ದೌಲತ್​ ಬೇಗ್​ ಓಲ್ಡೀ ರಸ್ತೆ ಅಭಿವೃದ್ಧಿ ಕಾಮಗಾರಿಯೂ ಇದರಲ್ಲಿ ಸೇರಿದೆ. ಈ ಕಾಮಗಾರಿಯೇ ಲಡಾಖ್​ ಬಿಕ್ಕಟ್ಟಿಗೆ ಕಾರಣವಾಗಿತ್ತು.
ಇದನ್ನೂ ಓದಿ:ಮೊದಲ ಹಂತದಲ್ಲಿ 375 ಜನರ ಮೇಲೆ ದೇಶೀಯ ಲಸಿಕೆ ಕೊವಾಕ್ಸಿನ್​ ಪ್ರಯೋಗ; 13ರವರೆಗೆ ನೋಂದಣಿಗೆ ಅವಕಾಶ
ರಕ್ಷಣಾ ಸಚಿವಾಲಯ ಮತ್ತು ಬಾರ್ಡರ್​ ರೋಡ್ಸ್​ ಆರ್ಗನೈಜೇಷನ್​ ಅಧಿಕಾರಿಗಳೊಂದಿಗೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಇತ್ತೀಚೆಗೆ ಸಭೆ ನಡೆಸಿದ್ದರು. ಮುಂಚೂಣಿ ನೆಲೆಗಳಿಗೆ ಸಂಪರ್ಕ ಒದಗಿಸುವ 30 ಸೇತುವೆಗಳ ನಿರ್ಮಾಣ ಕಾಮಗಾರಿ ಸೇರಿ ಒಟ್ಟು 20 ಸಾವಿರ ಕೋಟಿ ರೂ. ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇದನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು ಎನ್ನಲಾಗಿದೆ.
ಬಿಕ್ಕಟ್ಟಿನ ಪರಿಸ್ಥಿತಿಗಳು ತಿಂಗಳುಗಟ್ಟಲೆ ವಿಸ್ತರಣೆಗೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಅದನ್ನು ಗಮನದಲ್ಲಿಟ್ಟುಕೊಂಡು ವಾಸ್ತವ ಗಡಿರೇಖೆಯ ಮುಂಚೂಣಿ ನೆಲೆಗಳಿಗೆ ಸೇನೆ, ಯುದ್ಧೋಪಕರಣಗಳು ತ್ವರಿತವಾಗಿ ತಲುಪಲು ಅನುವಾಗುವಂತೆ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು ಎನ್ನಲಾಗಿದೆ.
ಕೋವಿಡ್ ಭಯದಿಂದ ನೀರಿಗೆ ಜಿಗಿದು ಯುವಕ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − one =
Remember me
