ನವದೆಹಲಿ:ಲಡಾಖ್​ ಪ್ರದೇಶದ ವಾಸ್ತವ ಗಡಿರೇಖೆ (ಎಲ್​ಎಸಿ) ಬಳಿ ಉದ್ಭವಿಸಿರುವ ಬಿಕ್ಕಟ್ಟನ್ನು ಪರಿಹರಿಸಿಕೊಳ್ಳಲು ಚೀನಾದೊಂದಿಗೆ ಮಾತುಕತೆ ಜಾರಿಯಲ್ಲಿದೆ. ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ತಿಳಿಸಿದ್ದಾರೆ.
ಚೀನಾ ಯುದ್ಧೋನ್ಮಾದದಲ್ಲಿದ್ದರೂ ಅದಕ್ಕೆ ಯುದ್ಧ ಬೇಕಾಗಿಲ್ಲ. ಹಾಗಾಗಿ ಉಭಯ ರಾಷ್ಟ್ರಗಳು ಮಾತುಕತೆ ಮೂಲಕ ಬಿಕ್ಕಟ್ಟು ಪರಿಹರಿಸಿಕೊಳ್ಳಲು ಬಯಸಿವೆ. ಈ ಹಿನ್ನೆಲೆಯಲ್ಲಿ ರಾಜತಾಂತ್ರಿಕ ಮಟ್ಟದ ಮಾತುಕತೆಗಳು ನಡೆಯುತ್ತಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಕ್ಕಟ್ಟು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಎರಡೂ ರಾಷ್ಟ್ರಗಳು ತಮ್ಮದೇ ಆದ ಸ್ಥಾಪಿತ ಸಂವಹನ ಕ್ರಮವನ್ನು ಹೊಂದಿವೆ. ಈ ವ್ಯವಸ್ಥೆಯನ್ನು ಈಗಾಗಲೆ ಜಾಗೃತಗೊಳಿಸಲಾಗಿದೆ. ಹಾಗಾಗಿ, ಈ ಬಿಕ್ಕಟ್ಟಿನ ಪರಿಹಾರಕ್ಕೆ ವಿಶ್ವಸಂಸ್ಥೆ ಸೇರಿ ಯಾರೊಬ್ಬರ ಮಧ್ಯಸ್ಥಿಕೆಯ ಅವಶ್ಯಕತೆಯೂ ಇಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಲಾಕ್​ಡೌನ್​ನಲ್ಲಿ ನಮ್ಮ ಬೆಂಗಳೂರಿನಲ್ಲಿ ಈ ವಸ್ತುಗೆ ಬೇಡಿಕೆ ಹೆಚ್ಚಾಗಿದೆಯಂತೆ…!
ಇದಕ್ಕೂ ಮುನ್ನ ಭಾರತ ಮತ್ತು ಚೀನಾ ನಡುವೆ ಉದ್ಭವಿಸಿರುವ ಬಿಕ್ಕಟ್ಟನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹೇಳಿದ್ದರು. ಆದರೆ, ಈ ರೀತಿಯ ಮಧ್ಯಸ್ಥಿಕೆಯನ್ನು ಉಭಯ ರಾಷ್ಟ್ರಗಳ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿರಸ್ಕರಿಸಿದ್ದರು.
ನೆರೆಹೊರೆ ರಾಷ್ಟ್ರಗಳೊಂದಿಗೆ ಸ್ನೇಹ ಮತ್ತು ಸೌಹಾರ್ದ ಸಂಬಂಧ ಹೊಂದುವುದು ಭಾರತದ ನೀತಿಯಾಗಿದೆ. ಆದರೆ, ಕೆಲವೊಮ್ಮೆ ಚೀನಾದೊಂದಿಗೆ ಇಂಥ ಪರಿಸ್ಥಿತಿ ಉದ್ಭವಿಸುತ್ತದೆ. ಈ ಹಿಂದೆ ಕೂಡ ಇಂಥ ಬಿಕ್ಕಟ್ಟುಗಳು ಉಂಟಾಗಿದ್ದವು. ಅವೆಲ್ಲವನ್ನೂ ಪರಿಹರಿಸಿಕೊಂಡ ರೀತಿಯಲ್ಲೇ ಈ ಬಿಕ್ಕಟ್ಟನ್ನೂ ಪರಿಹರಿಸಿಕೊಳ್ಳಲಾಗುವುದು ಎಂದು ರಾಜ್​ನಾಥ್​ ಸಿಂಗ್​ ಹೇಳಿದ್ದಾರೆ.
ದೌಲತಾ ಬೇಗ್​ ಓಲ್ಡೀ ಬಳಿ ಭಾರತ ಸೇತುವೆ ನಿರ್ಮಿಸುತ್ತಿರುವುದಕ್ಕೆ ಆಕ್ಷೇಪಿಸಿದ್ದ ಚೀನಾ ಎಲ್​ಎಸಿ ಬಳಿಗೆ 6 ಸಾವಿರಕ್ಕೂ ಹೆಚ್ಚು ಯೋಧರನ್ನು ರವಾನಿಸಿತ್ತು. ಇದಕ್ಕೆ ಪ್ರತಿಯಾಗಿ ಭಾರತ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಎಲ್​ಎಸಿ ಬಳಿ ನಿಯೋಜಿಸಿತ್ತು. ಇದರಿಂದಾಗಿ ಲಡಾಖ್​ನಲ್ಲಿ ಬಿಕ್ಕಟ್ಟು ಉಂಟಾಗಿತ್ತು.
ಶ್ರಮಿಕ ಎಕ್ಸ್​ಪ್ರೆಸ್​ ರೈಲುಗಳಲ್ಲಿ 80 ವಲಸೆ ಕಾರ್ಮಿಕರ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 4 =
Remember me
