ರಾಂಚಿ:ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಅಧ್ಯಕ್ಷ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಅವರ ಆರೋಗ್ಯ ಸಾಕಷ್ಟು ಗಂಭೀರವಾಗಿದೆ. ಶುಕ್ರವಾರದಂದು ಅವರನ್ನು ರಾಂಚಿಯ ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ಆರೋಗ್ಯ ಸಮಸ್ಯೆಗಳು ಕಂಡುಬಂದಿರುವುದಾಗಿ ತಿಳಿಸಲಾಗಿದೆ. ಇಂದು ಅಥವಾ ನಾಳೆ ಅವರನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಇದನ್ನೂ ಓದಿ:ಮೃತ ವ್ಯಕ್ತಿಯ ವೀರ್ಯದ ಹಕ್ಕು ಪತ್ನಿಗೆ ಮಾತ್ರ: ತಂದೆಯ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ!
ಬಹು ಕೋಟಿ ರೂಪಾಯಿ ಮೇವು ಹಗರಣ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ಲಾಲೂ ಪ್ರಸಾದ್​ ಹಲವು ತಿಂಗಳಿಂದ ಅನಾರೋಗ್ಯ ಪೀಡಿತರಾಗಿದ್ದಾರೆ. ಶ್ವಾಸಕೋಶಲ್ಲಿ ಅಲರ್ಜಿ ಉಂಟಾಗಿರುವುದಾಗಿ ಈ ಹಿಂದೆ ತಿಳಿಸಲಾಗಿತ್ತು. ಅದೇ ಸಮಸ್ಯೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪತ್ನಿ ಮತ್ತು ಮಕ್ಕಳು ಆಸ್ಪತ್ರೆಗೆ ದೌಡಾಯಿಸಿದ್ದರು.
ಅಪ್ಪನ ಆರೋಗ್ಯದ ಕುರಿತಾಗಿ ತೇಜಸ್ವಿ ಯಾದವ್​ ಮಾಹಿತಿ ನೀಡಿದ್ದಾರೆ. ಅಪ್ಪನ ಆರೋಗ್ಯ ಹದಗೆಟ್ಟಿದೆ. ಅವರ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದೆ. ಮುಖ ಊದಿದೆ. ಅವರನ್ನು ದೆಹಲಿಯ ಏಮ್ಸ್​ಗೆ ಸ್ಥಳಾಂತರಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ದೆಹಲಿಗೆ ಸ್ಥಳಾಂತರಿಸುವ ನಿರ್ಧಾರೆ ತೆಗೆದುಕೊಳ್ಳಲಾಗುವುದು. ಅದಕ್ಕೂ ಮೊದಲು ನ್ಯಾಯಾಲಯದಿಂದ ಅನುಮತಿ ಪಡೆಯಬೇಕಿರುವುದಾಗಿ ತಿಳಿಸಲಾಗಿದೆ.
ಇದನ್ನೂ ಓದಿ:ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಟ್ರಂಪ್​ಗೆ ಕೈ ಕೊಟ್ಟ ಮೆಲನಿಯಾ ಟ್ರಂಪ್​?! 15 ವರ್ಷಗಳ ದಾಂಪತ್ಯ ಅಂತ್ಯ?
ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಾಜಿ ಉಪ ಸಿಎಂ ತೇಜಶ್ವಿ ಯಾದವ್, ಮತ್ತು ಮಾಜಿ ಸಚಿವರಾದ ತೇಜ್ ಪ್ರತಾಪ್ ಯಾದವ್ ಸೇರಿ ಹಲವು ನಾಯಕರು ಲಾಲೂ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಬಂದಿದ್ದಾರೆ. (ಏಜೆನ್ಸೀಸ್​)
ಲಾಲೂ ಪ್ರಸಾದ್​ ಯಾದವ್​ ಆರೋಗ್ಯ ಇನ್ನಷ್ಟು ಗಂಭೀರ; ಆಸ್ಪತ್ರೆಗೆ ದೌಡಾಯಿಸಿದ ಕುಟುಂಬ

ಆನೆಗೇ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಕೊನೆಯುಸಿರೆಳೆದ ಆನೆ

ನಾನ್​ವೆಜ್​ ಪ್ರಿಯರಿಗೆ ಶುಭ ಸುದ್ದಿ! 1 ಗಂಟೆಯಲ್ಲಿ ಇಷ್ಟು ತಿಂದರೆ ನಿಮಗೆ ಸಿಗುತ್ತೆ ಬುಲೆಟ್​ ಬೈಕ್​!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve − 11 =
Remember me
