ರಾಯಗಡ:ಗುರುವಾರ (ಜುಲೈ 20) ಮುಂಜಾನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಸುಮಾರು 48 ಕುಟುಂಬಗಳಿಗೆ ಭಾರೀ ಹಾನಿ ಉಂಟಾಗಿದೆ. ಘಟನೆಯಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಸ್ಥಳೀಯ ನಿವಾಸಿಗಳು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ದೇಶವೇ ತಲೆತಗ್ಗಿಸುವಂತಹ ಘಟನೆ ಎಂದ ಪ್ರಧಾನಿ ಮೋದಿ
ಅವಶೇಷಗಳ ಅಡಿ ಸ್ಥಳೀಯ ನಿವಾಸಿಗಳು ಸಿಲುಕಿರುವ ಶಂಕೆ ಇದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಿಳಿಸಿದೆ. ಎರಡು ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ ಎಂದು ವರದಿಯೊಂದು ಉಲ್ಲೇಖಿಸಿದೆ. ಘಟನೆ ಬಗ್ಗೆ ಮಾತನಾಡಿರುವ ರಾಯಗಡ ಪೊಲೀಸ್​ ಅಧಿಕಾರಿ, “ರಾಯಗಡದ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭೂಕುಸಿತ ಉಂಟಾಗಿದ್ದು, ಇದರಿಂದ 48 ಕುಟುಂಬಗಳಿಗೆ ಹಾನಿಯಾಗಿದೆ. ಇದುವರೆಗೆ 22 ಜನರನ್ನು ರಕ್ಷಿಸಲಾಗಿದ್ದು, ನಿವಾಸಿಗಳು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ” ಎಂದು ಹೇಳಿದರು.
“ಪ್ರಸ್ತುತ ಪೊಲೀಸ್ ಮತ್ತು ಜಿಲ್ಲಾಡಳಿತದ 100ಕ್ಕೂ ಹೆಚ್ಚು ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ನಾವು ಎನ್‌ಡಿಆರ್‌ಎಫ್, ಸ್ಥಳೀಯರು ಮತ್ತು ಕೆಲವು ಎನ್‌ಜಿಒಗಳಿಂದ ಸಹಾಯ ಪಡೆಯುತ್ತಿದ್ದೇವೆ” ಎಂದು ರಾಯಗಢ ಪೊಲೀಸರು ಸ್ಥಳೀಯ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸ್ಥಳಕ್ಕೆ ಭೇಟಿ ಪರಿಸ್ಥಿತಿ ಬಗ್ಗೆ ಗಮನಹರಿಸಿದ್ದಾರೆ,(ಏಜೆನ್ಸೀಸ್).
ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ದೇಶವೇ ತಲೆತಗ್ಗಿಸುವಂತಹ ಘಟನೆ ಎಂದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 4 =
Remember me
