ನವದೆಹಲಿ:ಕೇದಾರನಾಥ ಯಾತ್ರೆ ಮಾರ್ಗದ ಗೌರಿಕುಂಡ್ ಬಳಿ ಕಳೆದ ರಾತ್ರಿ ಭೂಕುಸಿತ ಉಂಟಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಈ ಕಾರಣಕ್ಕೆ ಕೇದಾರನಾಥ ಯಾತ್ರೆಯನ್ನು ಇದೀಗ ಸ್ಥಗಿತಗೊಳಿಸಲಾಗಿದೆ.
ಇದನ್ನೂ ಓದಿ:ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ; ದ್ವೇಷದ ವಿರುದ್ಧ ಪ್ರೀತಿಯ ಗೆಲುವು ಎಂದ ಕಾಂಗ್ರೆಸ್ ನಾಯಕರು
ಮಧ್ಯರಾತ್ರಿಯ ಸುಮಾರಿಗೆ ಗೌರಿಕುಂಡ್ ಪ್ರದೇಶದಲ್ಲಿ ಸುರಿದ ಭಾರಿ ಮಳೆಗೆ ಮೂರು ಅಂಗಡಿಗಳು ಭೂಕುಸಿತಕ್ಕೆ ನೆಲಸಮಗೊಂಡಿದೆ. ಅಂಗಡಿಗಳು ಮತ್ತು ಹೋಟೆಲ್‌ಗಳ ಅವಶೇಷಗಳು ಮಂದಾಕಿನಿ ನದಿಯಲ್ಲಿ ಕುಸಿದಿರುವುದು ಕಂಡುಬಂದಿದ್ದು, ಕೆಲವರು ಪ್ರವಾಹದಲ್ಲಿ ಕೊಚ್ಚಿಹೋಗಿರಬಹುದು ಅಥವಾ ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ರುದ್ರಪ್ರಯಾಗ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೌರಭ್ ಗಹರ್ವಾರ್, ನಾಪತ್ತೆಯಾದವರಿಗಾಗಿ ಶೋಧ ನಡೆಸುತ್ತಿರುವಾಗ ನಾಲ್ಕು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಘಟನೆಯ ಬೆನ್ನಲ್ಲೇ ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರು ರಾಜ್ಯ ಸಚಿವಾಲಯದ ವಿಪತ್ತು ನಿಯಂತ್ರಣ ಕೊಠಡಿಗೆ ಭೇಟಿ ನೀಡಿ, ರಕ್ಷಣಾ ಕಾರ್ಯವನ್ನು ಕೂಡಲೇ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ,(ಏಜೆನ್ಸೀಸ್).
VIDEO | ಉತ್ತರಾಖಂಡ ದೇವಾಲಯದಲ್ಲಿ ಭೇಟಿಯಾದ ಪ್ರಧಾನಿ ಮೋದಿ ಮತ್ತು ಯೋಗಿ ಆದಿತ್ಯನಾಥ್ ಸಹೋದರಿಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
