ಬೆಂಗಳೂರು:ಮುಂದಿನ 48 ಗಂಟೆಗಳ ಕಾಲ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಆದರೆ ಉತ್ತರಾಖಂಡ ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ರಾಜ್ಯಗಳಲ್ಲಿ ಭಾರೀ ಮಳೆಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಸಿಕ್ಕಿಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ ಮತ್ತು ತಮಿಳುನಾಡು ಈ ರಾಜ್ಯಗಳಲ್ಲಿ 24ರಿಂದ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಮೂರು ದಿನಗಳ ಕಾಲ ಮಳೆಯಿಲ್ಲಮುಂದಿನ ಎರಡು-ಮೂರು ದಿನಗಳ ಕಾಲ ದೆಹಲಿಯಲ್ಲಿ ಮಳೆ ಇರುವುದಿಲ್ಲ. ಆಗಸ್ಟ್ 14-15 ರಂದು ಮಳೆ ನಿರೀಕ್ಷಿಸಲಾಗಿದೆ. ಇದಾದ ಬಳಿಕ 16 ಮತ್ತು 17ರಂದು ಮತ್ತೆ ಬಿಸಿಲಿರುತ್ತದೆ. ದೆಹಲಿಯಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 35.4 ಮತ್ತು ಕನಿಷ್ಠ ತಾಪಮಾನ 27.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂದು ಗರಿಷ್ಠ ತಾಪಮಾನವು ಸುಮಾರು 35 ಮತ್ತು ಕನಿಷ್ಠ ತಾಪಮಾನವು 28 ಡಿಗ್ರಿಗಳಷ್ಟು ಇರಬಹುದು. ಆದರೆ ಈ ದಿನಗಳಲ್ಲಿ ದೆಹಲಿಯಲ್ಲಿ ಜನರು ತೀವ್ರವಾದ ಬಿಸಿಲಿನಿಂದ ತೊಂದರೆಗೀಡಾಗಿದ್ದಾರೆ.
ಉತ್ತರಾಖಂಡದಲ್ಲಿ ರೆಡ್ ಅಲರ್ಟ್ಆಗಸ್ಟ್ 11-14ರವರೆಗೆ ಈ ದಿನಗಳಲ್ಲಿ ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಗುರುವಾರ ಕೇದಾರನಾಥ ಯಾತ್ರೆಯ ಮಾರ್ಗದಲ್ಲಿ ಭೂಕುಸಿತದಿಂದ ಐವರು ಯಾತ್ರಿಕರು ಸಾವನ್ನಪ್ಪಿದ್ದಾರೆ.
ಹಿಮಾಚಲದಲ್ಲಿ ಯೆಲ್ಲೋ ಅಲರ್ಟ್ಮತ್ತೊಂದೆಡೆ, ಹಿಮಾಚಲದಲ್ಲಿ ಮಳೆ ಮುಂದುವರೆದಿದೆ. ಇಲ್ಲಿಯೂ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಿಮಾಚಲದ ಸೋಲನ್‌ನಲ್ಲಿ ಶುಕ್ರವಾರ ಬೆಳಗ್ಗೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಶಿಮ್ಲಾ-ಕಲ್ಕಾ ರಾಷ್ಟ್ರೀಯ ಹೆದ್ದಾರಿ-5 ಅನ್ನು ಮುಚ್ಚಲಾಗಿದೆ.
pic.twitter.com/3hVDqGdUhe
— RWFC New Delhi (@RWFC_ND)August 11, 2023

ಸುಹೈಲ್‌ದೇವ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್​​​​ನಲ್ಲಿ ಟಿಟಿಇಯನ್ನು ಟಾಯ್ಲೆಟ್​​ ರೂಂನೊಳಗೆ ಕೂಡಿ ಹಾಕಿದ ಪ್ರಯಾಣಿಕರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 4 =
Remember me
