ಮುಂಬೈ:ಬಾಲಿವುಡ್​ ನಟ ಸಲ್ಮಾನ್​ ಖಾನ್​ಗೆ ಬೆದರಿಕೆ ಪತ್ರ ಕಳುಹಿಸಿದ್ದವರನ್ನು ಕೊನೆಗೂ ಮುಂಬೈ ಪೊಲೀಸರು ಪತ್ತೆ ಹಚ್ಚಿದ್ದಾರೆ.
ದೆಹಲಿಯ ಜೈಲಿನಲ್ಲಿರುವ ಲಾರೆನ್ಸ್​ ಬಿಷ್ಣೋಯಿ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಪೊಲೀಸರು ಆತನನ್ನು ವಿಚಾರಣೆಗೂ ಒಳಪಡಿಸಲಾಗಿತ್ತು. ಆದರೆ ಇದನ್ನು ಬಿಷ್ಣೋಯಿ ನಿರಾಕರಿಸಿದ್ದ.
ಇದೀಗ ಪ್ರಕರಣದ ಹೆಚ್ಚಿನ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಬೆದರಿಕೆ ಪತ್ರ ಹಿಂದಿರುವವರನ್ನು ಪತ್ತೆ ಹಚ್ಚಿದ್ದಾರೆ. ಲಾರೆನ್ಸ್​ ಬಿಷ್ಣೊಯಿ ತಂಡಕ್ಕೆ ಸೇರಿದ ಮೂವರಿಂದಲೇ ಈ ಪತ್ರ ಕಳುಹಿಸಲಾಗಿದೆ ಎಂಬುದು ದೃಢವಾಗಿದೆ. ಪಂಜಾಬ್​ ಗಾಯಕ ಸಿಧು ಮೂಸೆವಾಲ ಪ್ರಕರಣದಲ್ಲಿ ಮುಂಬೈಯಲ್ಲಿ ಇತ್ತೀಚೆಗೆ ಮೂವರನ್ನು ಬಂಧಿಸಲಾಗಿತ್ತು. ಇವರಿಂದಲೇ ಸಲ್ಮಾನ್​ ಖಾನ್​ಗೆ ಬೆದರಿಕೆ ಪತ್ರ ಬಂದಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಕಳೆದ ಭಾನುವಾರ ಬಾಂದ್ರಾದ ನಿವಾಸದ ಮುಂಭಾಗ ಬೆಳಗಿನ ಜಾವ ಕುಳಿತಿದ್ದ ಸಲ್ಮಾನ್​ ತಂದೆ ಸಲೀಂ ಖಾನ್​ ಅವರ ಮೇಲೆ ಪತ್ರವೊಂದನ್ನು ಎಸೆದು ಪರಾರಿಯಾಗುತ್ತಾರೆ. ಈ ಮೂವರೇ ಈ ಕೃತ್ಯ ಮಾಡಿದ್ದಾರೆ ಎಂದು ಸದ್ಯದ ಮಟ್ಟಿಗೆ ತಿಳಿದುಬಂದಿದೆ. ಇನ್ನೂ ಇದರಲ್ಲಿ ಉಳಿದವರ ಕೈವಾಡವಿರಬಹುದು ಎಂದು ಶಂಕಿಸಲಾಗಿದ್ದು, ಹೆಚ್ಚಿನ ತನಿಖೆಯನ್ನೂ ಕೈಗೊಂಡಿದ್ದಾರೆ.(ಏಜೆನ್ಸೀಸ್​)
ತಂದೆಯ ಹುಟ್ಟುಹಬ್ಬ: ಕುಟುಂಬದ ಜತೆ ತಿರುಪತಿಗೆ ಭೇಟಿ ನೀಡಿದ ದೀಪಿಕಾ ಪಡುಕೋಣೆ

ಇನ್ನೆರಡು ದಿನದಲ್ಲಿ ಈ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಮತ್ತೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
