ನವದೆಹಲಿ:ಬಾಲಿವುಡ್​ ನಟ ಸಲ್ಮಾನ್​ ಖಾನ್​ಗೆ ಬೆದರಿಕೆ ಪತ್ರ ಬಂದಿದ್ದು, ಇದರಲ್ಲಿ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಕೈವಾಡ ಇಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪಂಜಾಬ್​ ಖ್ಯಾತ ಗಾಯಕ ಹಾಗೂ ಕಾಂಗ್ರೆಸ್​ ನಾಯಕ ಸಿಧು ಮೂಸೆವಾಲಾ ಹತ್ಯೆ ಬೆನ್ನಲ್ಲೇ ಸಲ್ಮಾನ್​ ಖಾನ್​​ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು, ಈ ಬೆನ್ನಲ್ಲೇ ಬೆದರಿಕೆ ಪತ್ರಗಳು ಬಂದಿದ್ದವು. ಇದರಿಂದ ಎಚ್ಚೆತ್ತ ಮುಂಬೈ ಪೊಲೀಸರು ಸಲ್ಮಾನ್​ ಖಾನ್​ ನಿವಾಸಕ್ಕೆ ಹೆಚ್ಚಿನ ಭದ್ರತೆಯನ್ನು ಹಾಕಿದ್ದರು.
ಇದೀಗ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ದಿಲ್ಲಿ ಪೊಲೀಸರು, ಬಂಧನದಲ್ಲಿರುವ ಲಾರೆನ್ಸ್ ಬಿಷ್ಣೋಯಿ ಕೈವಾಡವಿದೆಯೇ ಎಂಬ ಬಗ್ಗೆ ನಡೆಸಿದ ಸಮಗ್ರ ತನಿಖೆಯಲ್ಲಿ ಈತನ ಕೈವಾಡವಿಲ್ಲ ಎಂದು ತಿಳಿದುಬಂದಿದೆ.
ಸಲ್ಮಾನ್​ ಖಾನ್​ಗೆ ಬೆದರಿಕೆ ಪತ್ರದ ಬಗ್ಗೆ ತನಗೇನೂ ಗೊತ್ತಿಲ್ಲ, ಇದರಲ್ಲಿ ಯಾರ ಕೈವಾಡವಿದೆ ಎಂಬುದೂ ನನಗೆ ತಿಳಿದಿಲ್ಲ ಎಂದು ಬಿಷ್ಣೋಯಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.
ಇದಕ್ಕೆ ಕಾರಣ, ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಲಾರೆನ್ಸ್​ ಬಿಷ್ಣೋಯ್​​ ಪ್ರಮುಖ ಆರೋಪಿಯಾಗಿದ್ದು, ಈತ ಈ ಹಿಂದೆ ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್​​ ಅವರನ್ನು ಹತ್ಯೆ ಮಾಡಲು ಬಿಷ್ಣೋಯ್​ ಸಂಚು ರೂಪಿಸಿದ್ದರಿಂದ ಈತನ ಮೇಲೆ ಅನುಮಾನ ವ್ಯಕ್ತವಾಗಿತ್ತು.
2018ರಲ್ಲಿ ರಾಜಸ್ಥಾನದಲ್ಲಿ ಕೃಷ್ಣಮೃಗ ಬೇಟೆ ಆಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್​ ಜೈಲಿಗೆ ಹೋಗಿದ್ದರು. ಈ ಸಮಯದಲ್ಲಿ ಕೋರ್ಟ್ ಹೊರಗೆ ಮಾತನಾಡಿದ್ದ ಬಿಷ್ಣೋಯ್, ಸಲ್ಮಾನ್ ಖಾನ್​ನನ್ನು​ ಕೊಲ್ಲುತ್ತೇವೆ ಎಂದು ಹೇಳಿಕೆ ನೀಡಿದ್ದ. ಆದ್ದರಿಂದ ಈತನನ್ನು ವಿಚಾರಣೆಗೊಳಪಡಿಸಿದಾಗ ಈತನು ಇದರಲ್ಲಿ ಭಾಗಿಯಾಗಿಲ್ಲ ಎಂದು ತಿಳಿದುಬಂದಿದೆ ಎಂಬ ವರದಿಯನ್ನು ದೆಹಲಿ ಪೊಲೀಸರು ನೀಡಿದ್ದಾರೆ.(ಏಜೆನ್ಸೀಸ್​)
ಬೆದರಿಕೆ ಪತ್ರ ಬೆನ್ನಲ್ಲೇ ಬಾಲಿವುಡ್​ ನಟ ಸಲ್ಮಾನ್​ಖಾನ್​​, ತಂದೆ ಸಲೀಂ ಖಾನ್​ಗೆ ಹೆಚ್ಚಾಯ್ತು ಭದ್ರತೆ

ನಿಜವಾಯ್ತು ಸಂದೇಹ: ಶೀಘ್ರದಲ್ಲೇ ನಿನ್ನ ಮರ್ಡರ್‌- ನಟ ಸಲ್ಮಾನ್‌ ಖಾನ್‌ ಟೇಬಲ್‌ ಮೇಲೆ ಬೆದರಿಕೆ ಪತ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + nine =
Remember me
