ನವದೆಹಲಿ:ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದ್ದಾರೆ . ಅವರು ಇತ್ತೀಚೆಗೆ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ಅವರ ಜೀವನದ ಗುರಿ ಎಂದು ಹೇಳಿದ್ದಾರೆ. ಕೃಷ್ಣಮೃಗವನ್ನು ಕೊಂದದ್ದಕ್ಕಾಗಿ ಸಲ್ಮಾನ್​ ಖಾನ್​ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆ ಎಂದು ಲಾರೆನ್ಸ್​ ಬಿಷ್ನೋಯ್​ ಹೇಳಿದರು.
“ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಅವರು ಬಿಕಾನೇರ್‌ನಲ್ಲಿರುವ ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಸಲ್ಮಾನ್ ಖಾನ್ ಅವರ ಭದ್ರತೆಯನ್ನು ತೆಗೆದುಹಾಕಿದರೆ ನಾನೇ ಅವನನ್ನು ಕೊಲ್ಲುತ್ತೇನೆ ಎಂದು ಬಿಷ್ಣೋಯ್ ಹೇಳಿದ್ದಾರೆ.
ಇದನ್ನೂ ಓದಿ:ಕರ್ನಾಟಕದ ನಟಿಯೊಂದಿಗೆ ಸಲ್ಮಾನ್ ಖಾನ್ ಡೇಟಿಂಗ್? ವೈರಲ್ ಆಗುತ್ತಿವೆ ಇವರಿಬ್ಬರ ಫೋಟೋಗಳು!
“ಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ. ಮೂಸ್ ವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ. ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲ. ಅವರು ಕ್ಷಮೆಯಾಚಿಸದಿದ್ದರೆ, ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿರಬೇಕು. ನಾನು ಬೇರೆಯವರನ್ನು ಅವಲಂಬಿಸುವುದಿಲ್ಲ” ಎಂದು ಲಾರೆನ್ಸ್​ ಬಿಷ್ನೋಯ್​ ಹೇಳಿದ್ದಾರೆ.
ಕ್ಷಮೆಯಾಚಿಸಲು ತಮ್ಮ ಆರಾಧ್ಯ ದೈವದ ದೇವಸ್ಥಾನಕ್ಕೆ ಭೇಟಿ ನೀಡುವಂತೆ ಲಾರೆನ್ಸ್​ ಬಿಷ್ನೋಯ್ ಸಲ್ಮಾನ್​ ಖಾನ್​ಗೆ ಹೇಳಿದ್ದರು. “ಅವರು ನಮ್ಮ ದೇವರ ಗುಡಿಗೆ ಬಂದು ಕ್ಷಮೆ ಕೇಳಬೇಕು. ನಮ್ಮ ಸಮಾಜ ಕ್ಷಮಿಸಿದರೆ ನಾನೇನೂ ಹೇಳುವುದಿಲ್ಲ,” ಎಂದು ಹೇಳಿದ್ದರು.
ಇದನ್ನೂ ಓದಿ:ಜೀವ ಬೆದರಿಕೆ: ಶಸ್ತ್ರಾಸ್ತ್ರಕ್ಕೆ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ ಬಾಲಿವುಡ್​ ನಟ ಸಲ್ಮಾನ್ ಖಾನ್​
ಸಲ್ಮಾನ್ ಖಾನ್ ಲಾರೆನ್ಸ್ ಬಿಷ್ಣೋಯ್ ಹಿಟ್​ಲಿಸ್ಟ್​ನಲ್ಲಿ ಬಹಳ ಸಮಯದಿಂದ ಇದ್ದಾರೆ. 2018ರಲ್ಲಿ, ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್​ ಖಾನ್​ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಕೃಷ್ಣಮೃಗಗಳು ತಮ್ಮ ಆಧ್ಯಾತ್ಮಿಕ ನಾಯಕ ಭಗವಾನ್ ಜಂಬೇಶ್ವರನ ಪುನರ್ಜನ್ಮ ಎಂದು ಬಿಷ್ಣೋಯಿಗಳು ನಂಬುತ್ತಾರೆ, ಇದನ್ನು ಜಾಂಬಾಜಿ ಎಂದೂ ಕರೆಯುತ್ತಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 4 =
Remember me
