ಲಖನೌ:ವಕೀಲರೊಬ್ಬರನ್ನು ನ್ಯಾಯಾಲಯದ ಒಳಗೇ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆಯೊಂದು ಉತ್ತರಪ್ರದೇಶದ ಶಹಜಾನ್​ಪುರದಿಂದ ವರದಿಯಾಗಿದೆ. ಮೃತ ವ್ಯಕ್ತಿಯನ್ನು, ಕಳೆದ ನಾಲ್ಕೈದು ವರ್ಷಗಳಿಂದ ವಕಾಲತ್ತು ನಡೆಸುತ್ತಿರುವ ಜಲಾಲಾಬಾದ್​ನ ನಿವಾಸಿ ಭೂಪೇಂದ್ರ ಪ್ರತಾಪ್​ ಸಿಂಗ್​ ಎಂದು ಗುರುತಿಸಲಾಗಿದೆ.
ಶಹಜಹಾನ್​ಪುರ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಮೂರನೇ ಮಹಡಿಯಲ್ಲಿ ಇಂದು ಬೆಳಿಗ್ಗೆ 11.45ರ ಸುಮಾರಿಗೆ ಈ ಕೊಲೆ ನಡೆದಿದೆ. ಮೃತ ದೇಹದ ಬಳಿ ಒಂದು ಕಂಟ್ರಿ ಗನ್​ ಪತ್ತೆಯಾಗಿದೆ. ಹಿರಿಯ ಪೋಲೀಸ್ ಅಧಿಕಾರಿಗಳು ಮತ್ತು ಫೊರೆನ್ಸಿಕ್​ ತಂಡ ಸ್ಥಳ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಘಟನೆಯಿಂದ ಉಂಟಾದ ಆತಂಕದ ವಾತಾವರಣವನ್ನು ತಿಳಿಗೊಳಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯುಕ್ತಿಗೊಳಿಸಲಾಗಿದೆ ಎನ್ನಲಾಗಿದೆ. ಕೃತ್ಯದ ಬಗ್ಗೆ ಅಥವಾ ಹತ್ಯೆಕೋರನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.(ಏಜೆನ್ಸೀಸ್)
ಹಳಿಗಳ ಮೇಲೆ ಧರಣಿ ಕೂತ ರೈತ ಪ್ರತಿಭಟನಾಕಾರರು; ಕೆಲವೆಡೆ ರೈಲು ಸಂಚಾರ ವ್ಯತ್ಯಯ

ಪಾಪ ಪಾಂಡು ಖ್ಯಾತಿಯ ಹಿರಿಯ ಕಲಾವಿದ ಶಂಕರ್ ರಾವ್​ ಇನ್ನಿಲ್ಲ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × five =
Remember me
