ತಿರುವನಂತಪುರಂ:ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ 350 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಘಟನೆಯಲ್ಲಿ ಇನ್ನೂ 200 ಮಂದಿ ನಾಪತ್ತೆಯಾಗಿದ್ದಾರೆ. ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಘಟನಾ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿದ್ದು, ಗಾಯಾಳುಗಳಿಂದ ತುಂಬಿರುವ ವಯನಾಡಿನ ಪರಿಹಾರ ಶಿಬಿರಗಳು ಮತ್ತು ವಿಮ್ಸ್ ಆಸ್ಪತ್ರೆಗೂ ಗೋಪಿ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ:ರಾಹುಲ್ ಅರೆಸ್ಟ್ ಮಾಡುವ ಧೈರ್ಯವಿದೆಯಾ?: ಬಿಜೆಪಿಗೆ ಕಾಂಗ್ರೆಸ್ ನಾಯಕ ಸವಾಲು
ಬಳಿಕ ಮಾತನಾಡಿದ ಅವರು, ಭೂಕುಸಿತ ಘಟನೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕಾನೂನಾತ್ಮಕ ಅಂಶಗಳನ್ನು ಪರಿಗಣಿಸುತ್ತಿದ್ದೇವೆ. ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸಿದ್ಧವಿದೆ. ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಮೊದಲು ಕಾನೂನು ಅಂಶಗಳನ್ನು ವಿಶ್ಲೇಷಿಸಬೇಕು. ಪ್ರಸ್ತುತ, ಸಂತ್ರಸ್ತರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲು ಮತ್ತು ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ನಮ್ಮ ಗಮನ ಕೇಂದ್ರೀಕರಿಸಿದ್ದೇವೆ ಎಂದರು.
ಶೋಧ ಕಾರ್ಯಾಚರಣೆಗೆ ಹೆಚ್ಚಿನ ಪಡೆಗಳು ಅಗತ್ಯವಿದ್ದರೆ, ಕೇರಳ ಸರ್ಕಾರವು ಕೇಂದ್ರವನ್ನು ಸಂಪರ್ಕಿಸಬೇಕು. ಕೇಂದ್ರ ಸರ್ಕಾರವು ಖಂಡಿತಾ ಪರಿಶೀಲಿಸುತ್ತದೆ ಎಂದು ಹೇಳಿದರು.
“ದೇಶವು ನಿಮ್ಮ ಬೆನ್ನಿನಲ್ಲಿದೆ” ಎಂದು ಈ ಪ್ರದೇಶಗಳಲ್ಲಿ ಸ್ಥಾಪಿಸಲಾದ ಪುನರ್ವಸತಿ ಶಿಬಿರಗಳು ಮತ್ತು ಆಸ್ಪತ್ರೆಗಳಲ್ಲಿ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಇದು ನೋವಿನ ಪರಿಸ್ಥಿತಿ. ಖಂಡಿತವಾಗಿಯೂ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು, ಸಹಕಾರ ನೀಡುವುದಾಗಿ ಹೇಳಿದರು.
ಆಗಸ್ಟ್ 1 ರಂದು ಅವರು ತಮ್ಮ ಸಹೋದರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ವಯನಾಡಿನ ಮುಂಡಕ್ಕೈ, ಚುರಲ್ಮಲಾ, ಅಟ್ಟಮಾಲಾ ಮತ್ತು ಮೆಪ್ಪಾಡಿ ಗ್ರಾಮಗಳಲ್ಲಿ ಪ್ರವಾಸ ಮಾಡಿದ್ದ ರಾಹುಲ್ ನನ್ನ ದೃಷ್ಟಿಯಲ್ಲಿ ಇದೊಂದು ರಾಷ್ಟ್ರೀಯ ವಿಪತ್ತು ಎಂದು ಹೇಳಿದ್ದರು.
ಸಂತ್ರಸ್ತರಿಗೆ ಎಲ್ಲ ರೀತಿಯ ಸಹಾಯ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಪಿಣರಾಯಿ ಹೇಳಿದ್ದಾರೆ. ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಘಟನೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಳಿಕೊಂಡಿದ್ದರು.
ಒಲಿಂಪಿಕ್ಸ್‌ನಲ್ಲಿ ಭಾರತ ಸಂಚಲನ.. ಬ್ರಿಟನ್ನನ್ನು ಸೋಲಿಸಿ ಸೆಮಿಸ್‌ಗೆ ಪ್ರವೇಶಿಸಿದ ಪುರುಷರ ಹಾಕಿ ತಂಡ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 + five =
Remember me
