ಮುಂಬೈ:ನಿಯಮ ಉಲ್ಲಂಘನೆ ಮಾಡಿದ ಮಹಾರಾಷ್ಟ್ರದ ಆರು ಕೆಮ್ಮಿನ ಔಷಧ ತಯಾರಕ ಕಂಪನಿಗಳ ಪರವಾನಗಿಯನ್ನು ಸರ್ಕಾರ ಅಮಾನತುಗೊಳಿಸಿದೆ. ನಾಲ್ಕು ಕಂಪನಿಗಳಿಗೆ ಉತ್ಪಾದನೆಯನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ ಎಂದು ಆಹಾರ ಮತ್ತು ಔಷಧ ಆಡಳಿತ ಸಚಿವ ಸಂಜಯ್ ರಾಥೋಡ್ ತಿಳಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಶಾಸಕ ಆಶಿಶ್ ಶೇಲಾರ್ ಮಾತನಾಡಿ, ಉತ್ತರ ಪ್ರದೇಶದ ನೋಯ್ಡಾ ಮೂಲದ ಸಂಸ್ಥೆಯೊಂದು ತಯಾರಿಸಿದ ಕೆಮ್ಮಿನ ಸಿರಪ್ ಕಳೆದ ವರ್ಷ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳ ಸಾವಿಗೆ ಕಾರಣವಾಗಿತ್ತು. ಈ ಆರೋಪದ ಬೆನ್ನಲ್ಲೇ ಸಂಸ್ಥೆಯ ಮೂವರು ಉದ್ಯೋಗಿಗಳನ್ನು ಬಂಧಿಸಿರುವುದಾಗಿ ನೋಯ್ಡಾ ಪೊಲೀಸರು ತಿಳಿಸಿದ್ದಾರೆ. ಭಾರತದಿಂದ ಆಮದು ಮಾಡಿಕೊಳ್ಳಲಾದ ಕೆಮ್ಮು ಸಿರಪ್‌ಗಳಿಂದಾಗಿ ಗ್ಯಾಂಬಿಯಾದಲ್ಲಿ 66 ಮಕ್ಕಳು ಸಾವನ್ನಪ್ಪಿದ್ದರು ಎಂದಿದ್ದಾರೆ.
ಇದನ್ನೂ ಓದಿ:ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ತರಗತಿಯಲ್ಲೇ ಪ್ರಾಣ ಬಿಟ್ಟ ಶಿಕ್ಷಕ
ಉತ್ತರಿಸಿದ ಸಚಿವ ರಾಥೋಡ್, ರಾಜ್ಯದಲ್ಲಿ 108 ಕೆಮ್ಮು ಸಿರಪ್ ತಯಾರಕ ಕಂಪನಿಗಳ ಪೈಕಿ 84 ಕಂಪನಿಗಳ ವಿರುದ್ಧ ಮಹಾರಾಷ್ಟ್ರ ಸರ್ಕಾರವು ತನಿಖೆಯನ್ನು ಪ್ರಾರಂಭಿಸಿದೆ. ಜೊತೆಗೆ ನಿಯಮಗಳ ಉಲ್ಲಂಘನೆಗಾಗಿ 17 ಸಂಸ್ಥೆಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.  ನಿಯಮಗಳ ಉಲ್ಲಂಘನೆಯ ಆರೋಪ ಎದುರಿಸುತ್ತಿರುವ ಕಂಪನಿ ಹರಿಯಾಣದಲ್ಲಿದ್ದು, ಮಹಾರಾಷ್ಟ್ರದಲ್ಲಿ ಯಾವುದೇ ಉತ್ಪಾದನಾ ಘಟಕವನ್ನು ಹೊಂದಿಲ್ಲ. ಆದಾಗ್ಯೂ, ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ನಾವು ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ರಾಜ್ಯದಿಂದ ಉತ್ಪನ್ನಗಳನ್ನು ರಫ್ತು ಮಾಡುವಾಗ ವಿಶ್ವ ಆರೋಗ್ಯ ಸಂಸ್ಥೆಯ ಜಿಎಂಪಿ ಪ್ರಮಾಣೀಕರಣ-ಸಂಬಂಧಿತ ನಿಯಮಗಳು ಮತ್ತು ಔಷಧೀಯ ಉತ್ಪನ್ನಗಳ ಪ್ರಮಾಣಪತ್ರವನ್ನು ಅನುಸರಿಸಲಾಗಿದೆಯೇ ಎಂಬುದನ್ನು ನಾವು ಖಚಿತಪಡಿಸಿಕೊಂಡ ನಂತರ ವಿದೇಶಗಳಿಗೆ ರಫ್ತು ಮಾಡಲಾಗುತ್ತದೆ ಎಂದು ರಾಥೋಡ್​ ವಿವರಿಸಿದ್ದಾರೆ.
ಕೈಲಾಸದಲ್ಲಿ ಉಚಿತ ಇ-ಪೌರತ್ವಕ್ಕಾಗಿ ಜನರನ್ನು ಆಹ್ವಾನಿಸಿದ ನಿತ್ಯಾನಂದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
