ಹೈದರಾಬಾದ್:ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ನೀಡಲಾಗಿದ್ದ ಉಪಾಹಾರ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ತೆಲಂಗಾಣದ ಮೇಡಕ್​ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಾಮಯಂಪೇಟ್​ನ ಟಿಜಿ ಮಾಡೆಲ್​ ಸ್ಕೂಲ್​ನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಹಾಸ್ಟೆಲ್​ ಉಸ್ತುವಾರಿ ಹಾಗೂ ವಿಶೇಷ ಅಧಿಕಾರಿಗೆ ನೋಟಿಸ್​ ನೀಡಲಾಗಿದ್ದು, ಅಡುಗೆ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮೇಡಕ್ ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ:ಅನಂತ್ ಅಂಬಾನಿ ಮದುವೆ ಊಟದಲ್ಲಿ ಸಿಕ್ತು ಕೂದಲು; ವೈರಲ್​ ಆಗುತ್ತಿದೆ ವಿಡಿಯೋ
ಈ ಕುರಿತು ಮಾತನಾಡಿರುವ ಮೇಡಕ್​ ಜಿಲ್ಲಾ ಶಿಕ್ಷಣಾಧಿಕಾರಿ, ಹಾಸ್ಟೆಲ್​ ವಿದ್ಯಾರ್ಥಿನಿಯರಿಗೆ ಬೆಳಗಿನ ತಿಂಡಿಗೆ ಉಪ್ಪಿಟ್ಟನ್ನು ನೀಡಲಾಗಿತ್ತು. ಅದರಲ್ಲಿ ಹಲ್ಲಿ ಇರುವುದನ್ನು ವಿದ್ಯಾರ್ಥಿನಿಯರು ಕಂಡಿದ್ದಾರೆ. ಕೂಡಲೇ ಹಾಸ್ಟೆಲ್​ ಸಿಬ್ಬಂದಿ ಈ ವಿಚಾರವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂಡಿದ್ದು, ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಹೇಳಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮೇಡಕ್ ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + nine =
Remember me
