ನವದೆಹಲಿ:ಬಿಹಾರ ವಿಧಾನಸಭಾ ಚುನಾವಣೆ ಘೋಷಣೆಯಾದ ಬೆನ್ನಿಗೇ ಎನ್​ಡಿಎ ಮೈತ್ರಿಕೂಟದಿಂದ ಲೋಕ ಜನಶಕ್ತಿ ಪಾರ್ಟಿ (ಎಲ್​ಜೆಪಿ) ಭಾನುವಾರ ಹೊರಬಿದ್ದಿದೆ. ಬಿಹಾರಕ್ಕೆ ಸೀಮಿತವಾಗಿ ಮೈತ್ರಿ ಕಡಿದುಕೊಂಡಿರುವ ಎಲ್​ಜೆಪಿ ನಾಯಕ ಚಿರಾಗ್​ ಪಾಸ್ವಾನ್ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ತೊಡೆ ತಟ್ಟಿದ್ದಾರೆ. ಬಿಹಾರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ರಾಜ್ಯದಲ್ಲಿ ಸ್ಥಾಪಿಸುವುದಾಗಿ ಪಾಸ್ವಾನ್​ ಘೋಷಿಸಿದ್ದಾರೆ.
ಮೈತ್ರಿ ನಿಯಮದಂತೆ ನಿತೀಶ್ ಕುಮಾರ್ ಮುಖ್ಯಮಂತ್ರಿ ಅಭ್ಯರ್ಥಿ. ಅವರ ಪಕ್ಷ ಜೆಡಿಯು ಎಲ್ಲೆಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದೋ ಅಲ್ಲೆಲ್ಲ ಎಲ್​ಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಿದೆ. ಪಕ್ಷದ ಶಾಸಕರು ಬಿಜೆಪಿ ಸರ್ಕಾರ ರಚನೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಿದ್ದಾರೆ ಎಂಬ ನಿರ್ಣಯವನ್ನು ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಘೋಷಿಸಿದ್ದಾರೆ.
ಇದನ್ನೂ ಓದಿ:ಕಲ್ಯಾಣ್​ ಮನೆ ಒಡೆದ ಜ್ಯೋತಿ ಕುಲಕರ್ಣಿ ಸಾಮಾನ್ಯಳಲ್ಲ ಎಂದ್ರು ಪೊಲೀಸ್ ಅಧಿಕಾರಿ!
ನವದೆಹಲಿಯಲ್ಲಿ ಇಂದು ನಡೆದ ಎಲ್​ಜೆಪಿಯ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಅಕ್ಟೋಬರ್ 28ರಿಂದ ಮೂರು ಹಂತದಲ್ಲ ಮತದಾನ ನಡೆಯಲಿದೆ. ಬಿಹಾರ ಚುನಾವಣೆಗೆ ಸಂಬಂಧಿಸಿ ರಾಷ್ಟ್ರಮಟ್ಟದಲ್ಲಿ ಸೈದ್ಧಾಂತಿಕ ಭಿನ್ನಮತ ಏರ್ಪಟ್ಟ ಕಾರಣ ಎಲ್​ಜೆಪಿ ಪ್ರತ್ಯೇಕವಾಗಿ ಚುನಾವಣೆ ಎದುರಿಸುವುದಕ್ಕೆ ನಿರ್ಣಯಿಸಿದೆ. ಸೈದ್ಧಾಂತಿಕ ಭಿನ್ನಾಭಿಪ್ರಾಯ ಜೆಡಿಯು ಜತೆಗೆ ಆದ ಕಾರಣ, ರಾಜ್ಯದಲ್ಲಿ ಅದರ ವಿರುದ್ಧವೇ ಸ್ಪರ್ಧೆ ಇರಲಿದೆ. ಬಿಹಾರ ಚುನಾವಣೆಯಲ್ಲಿ 243 ವಿಧಾನಸಭಾ ಸ್ಥಾನಗಳ ಪೈಕಿ ಎಲ್​ಜೆಪಿ 143 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಚಿರಾಗ್ ಘೋಷಿಸಿದ್ದಾರೆ. (ಏಜೆನ್ಸೀಸ್)
ಚೀನಾ ಜತೆಗೆ ಸಮರಕ್ಕೆ ಸಜ್ಜಾಗುತ್ತಿದೆ ಭಾರತೀಯ ಸೇನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 11 =
Remember me
