ನವದೆಹಲಿ:ಬಾಬ್ರಿ ಕಟ್ಟಡ ಧ್ವಂಸ ಪ್ರಕರಣ ಸಂಬಂಧ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಹೇಳಿಕೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ ದಾಖಲಿಸಿಕೊಂಡಿದೆ. ಲಖನೌ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ. ಯಾಧವ್ ಸಮ್ಮುಖದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಆಡ್ವಾಣಿಯ ವರ ಹೇಳಿಕೆ ಪಡೆಯಲಾಗಿದೆ. ಬೆಳಗ್ಗೆ 11 ಗಂಟೆ ಯಿಂದ ಮಧ್ಯಾಹ್ನ 3.30ರ ವರೆಗೆ ವಿಚಾರಣೆ ನಡೆಯಿತು. ಆಡ್ವಾಣಿ ಅವರಿಗೆ 100ಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಲಾಯಿತು.
ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ಅವರು ಅಲ್ಲಗಳೆದರು ಎಂದು ವಕೀಲರು ಮಾಹಿತಿ ನೀಡಿದ್ದಾರೆ. ಬಿಜೆಪಿ ನಾಯಕ ಮುರಳಿ ಮನೋಹರ್ ಜೋಶಿ ಅವರ ಹೇಳಿಕೆಯನ್ನು ನ್ಯಾಯಾಲಯ ಗುರುವಾರ ದಾಖಲಿಸಿಕೊಂಡಿತ್ತು. ಪ್ರಕರಣದ ಇನ್ನಿತರ ಆರೋಪಿ ಗಳಾದ ರಾಮಚಂದ್ರ ಖತಿ, ಶಿವಸೇನೆ ಸಂಸದ ಸತೀಶ್ ಪ್ರಧಾನ್ ಈಗಾಗಲೇ ಹೇಳಿಕೆಗಳನ್ನು ದಾಖಲಿಸಿ ದ್ದಾರೆ. ಆಗಸ್ಟ್ 31ರೊಳ ಗಾಗಿ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸ ಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಲಖನೌ ವಿಶೇಷ ನ್ಯಾಯಾಲಯ ದಿನನಿತ್ಯ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆ ನಡೆಸುತ್ತಿದೆ.
ಕರೊನಾ ಗೆದ್ದ ರಾಜ್ಯದ ಮೊದಲ ಶತಾಯುಷಿ ಏನನ್ನುತ್ತಾರೆ ಕೇಳಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 3 =
Remember me
