ನವದೆಹಲಿ:ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಲಾಲ್​ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಅವರು, ಎಲ್​​ಕೆ ಅಡ್ವಾಣಿ ಜೀ ಅವರಿಗೆ ಭಾರತ ರತ್ನ ನೀಡುವ ಬಗ್ಗೆ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.
ಎಲ್​.ಕೆ. ಅಡ್ವಾನಿ ಜೀ ಅವರಿಗೆ ಭಾರತ ರತ್ನ ನೀಡುವ ಬಗ್ಗೆ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣೀಯವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
I am very happy to share that Shri LK Advani Ji will be conferred the Bharat Ratna. I also spoke to him and congratulated him on being conferred this honour. One of the most respected statesmen of our times, his contribution to the development of India is monumental. His is a…pic.twitter.com/Ya78qjJbPK
ಇದನ್ನೂ ಓದಿ:ಆರ್​ಸಿಬಿ-ಸಿಎಸ್​ಕೆ ಪಂದ್ಯದ ಕುರಿತು ಪೋಸ್ಟ್​; ತಮಿಳು ಜನರ ಕ್ಷಮೆಯಾಚಿಸಿದ ಕನ್ನಡತಿ
ಅಡ್ವಾಣಿ ಅವರ ಸಾರ್ವಜನಿಕ ಜೀವನದಲ್ಲಿ ದಶಕಗಳ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ರಾಜಕೀಯ ನೈತಿಕತೆಯಲ್ಲಿ ಅನುಕರಣೀಯ ಮಾನದಂಡವನ್ನು ಅವರು ಹೊಂದಿದ್ದರು. ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅವರು ಅಸಾಮಾನ್ಯ ಪ್ರಯತ್ನಗಳನ್ನು ಮಾಡಿದ್ದಾರೆ. ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದು ನನಗೆ ಬಹಳ ಭಾವನಾತ್ಮಕ ಕ್ಷಣವಾಗಿದೆ. ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರಿಂದ ಕಲಿಯಲು ನನಗೆ ಅಸಂಖ್ಯಾತ ಅವಕಾಶಗಳು ಸಿಕ್ಕಿದ್ದು ನನ್ನ ಸುಯೋಗ ಎಂದು ನಾನು ಯಾವಾಗಲೂ ಪರಿಗಣಿಸುತ್ತೇನೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಎಲ್​.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸುತ್ತಿದ್ದಂತೆ ಬಿಜೆಪಿ ಮತ್ತು ಅದರ ಮಿತ್ರಪಕ್ಷದ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ಮುತ್ಸದಿ ನಾಯಕನಿಗೆ ಶುಭ ಕೋರಿದ್ದಾರೆ. ಕರ್ನಾಟಕ ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಎಚ್​.ಡಿ. ಕುಮಾರಸ್ವಾಮಿ, ಬಸವರಾಜ್​ ಬೊಮ್ಮಾಯಿ ಸೇರಿದಂತೆ ಅನೇಕ ನಾಯಕರು ಶುಭ ಕೋರಿದ್ದಾರೆ.
ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಅವರ ಪ್ರಯತ್ನ ಅಸಾಧಾರಣವಾದದ್ದು, ಹಲವಾರು ದಶಕಗಳ ಸಾರ್ವಜನಿಕ ಜೀವನದಲ್ಲಿ ಅವರ ನಾಯಕತ್ವ, ಸಂಸದರಾಗಿ, ಕೇಂದ್ರ ಸಚಿವರಾಗಿ,…pic.twitter.com/Johi5eVFFk
Heartfelt congratulations to senior politician, BJP stalwart, and former Deputy Prime Minister Mr. LK Advani, who has been honoured with the prestigious 'Bharat Ratna,' the country's highest civilian award.Thanks to the central government and Prime Minister Shri@narendramodi…pic.twitter.com/93EGUArJj5
“ಭಾರತದ ಸೇವಕನಿಗೆ ಒಲಿದ ಭಾರತ ರತ್ನ”ಭಾರತದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ಹಿರಿಯ ಮುತ್ಸದ್ಧಿ ನಾಯಕ, ದಣಿವರಿಯದ ಧೀಮಂತ, ಅವಿಶ್ರಾಂತ ಹೋರಾಟಗಾರ ಭಾರತದ ಮಾಜಿ ಉಪಪ್ರಧಾನಿ ಶ್ರೀ ಎಲ್.ಕೆ.ಅಡ್ವಾಣಿಯವರಿಗೆ ಭಾರತ ರತ್ನ ಪುರಸ್ಕಾರ ದೊರೆತಿರುವುದು ನಿಜಕ್ಕೂ ಅತ್ಯಂತ ಸಂತಸದ ವಿಚಾರ. ಭಾರತ ರತ್ನ ಶ್ರೀ ಎಲ್.ಕೆ.ಅಡ್ವಾಣಿಯವರಿಗೆ…pic.twitter.com/tMYESpwnBX
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:twelve − eight =
Remember me
