ನವದೆಹಲಿ:ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರತಿಪಾದಿಸಿದ್ದಾರೆ. ಸಂಸತ್ತಿನಲ್ಲಿ ಅಂಗೀಕರಿಸಲಾದ ಕಾನೂನುಗಳನ್ನು ಜನಸಾಮಾನ್ಯರೂ ಅರ್ಥ ಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದಿದ್ದಾರೆ.
ಕಾನೂನಿನ ಸರಳ ಆವೃತ್ತಿಯನ್ನು ಸಂಸತ್ತಿನಲ್ಲಿ ಅಂಗೀಕರಿಸಿದರೆ ಜನರು ಕಾನೂನಿನ ವ್ಯಾಖ್ಯಾನಕ್ಕಾಗಿ ಕೋರ್ಟ್ ಮೊರೆ ಹೋಗುವ ಅಗತ್ಯವಿಲ್ಲ. ಸರ್ಕಾರ ಈ ವಿಚಾರದಲ್ಲಿ ಅಧ್ಯಯನ ನಡೆಸುತ್ತಿದೆ ಎಂದು ಮುಖ್ಯಮಂತ್ರಿಗಳು ಮತ್ತು ಹೈ ಕೋರ್ಟ್ ಗಳ ಮುಖ್ಯ ನ್ಯಾಯ ಮೂರ್ತಿಗಳ ಜಂಟಿ ಸಮ್ಮೇಳನ ಉದ್ಘಾಟಿಸಿದ ಮೋದಿ ಹೇಳಿದರು. ನ್ಯಾಯ ಲಭ್ಯತೆಯ ಅವಕಾಶ ಸುಧಾರಿಸುವ ವಿಚಾರ ಪ್ರಸ್ತಾಪಿಸಿದ ಮೋದಿ, ಕಾನೂನು ಶಿಕ್ಷಣದ ಅಧ್ಯಯನ ಮತ್ತು ವಕೀಲಿ ವೃತ್ತಿಯಲ್ಲಿ ಕೂಡ ಸ್ಥಳೀಯ ಭಾಷೆ ಬಳಸುವುದು ಅಗತ್ಯ ಎಂದು ಪ್ರತಿಪಾದಿಸಿದರು. 2047ರ ವೇಳೆಗೆ ದೇಶದ ನ್ಯಾಯಾಂಗ ನಿರ್ವಹಿಸಬೇಕಾದ ಗುರಿಯನ್ನು ನಿಗದಿಪಡಿಸುವಂತೆ ಅವರು ನ್ಯಾಯಮೂರ್ತಿಗಳು ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಲಕ್ಷ್ಮಣರೇಖೆ ನೆನಪಿಸಿದ ಸಿಜೆಐ:ಸಮ್ಮೇಳನದಲ್ಲಿ ಮಾತನಾಡಿದ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ಅಧಿಕಾರದ 3 ಅಂಗಗಳ ಪ್ರತ್ಯೇಕ ಕಾರ್ಯ ನಿರ್ವಹಣೆ ಯನ್ನು ಸಂವಿಧಾನ ಸ್ಪಷ್ಟಪಡಿಸಿದೆ. ಈ ಮೂರು ಅಂಗಗಳು ಕರ್ತವ್ಯ ನಿರ್ವಹಿಸುವಾಗ ತಮ್ಮ ಮಿತಿಯ ‘ಲಕ್ಷ್ಮಣ ರೇಖೆ’ಯನ್ನು ನೆನಪಿಟ್ಟುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ಅವಕಾಶವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿರುವುದಕ್ಕೆ ಸಿಜೆಐ ಅಸಮಾಧಾನ ವ್ಯಕ್ತಪಡಿಸಿದರು.
ಬರ್ಬರವಾಗಿ ಕೊಲೆಯಾದ ಜಿಮ್ ಟ್ರೇನರ್; ಮೂವರು ಆರೋಪಿಗಳ ಬಂಧನ!

ಲಾಕ್​ಡೌನ್​ ಸೆಕ್ಸ್​: ಆರ್​ಟಿಐನಲ್ಲಿ ಬಹಿರಂಗವಾಯ್ತು ಆತಂಕಕಾರಿ ವಿಷಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − six =
Remember me
