ನವದೆಹಲಿ:ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್​ ಅವಧಿಯನ್ನು ಇನ್ನು ಒಂದು ವಾರ ಕಾಲ ವಿಸ್ತರಣೆ ಮಾಡಲಾಗಿದೆ.
ಈ ವಿಚಾರವಾಗಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​, ರಾಜ್ಯದ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಕರೊನಾ ತನ್ನ ಭೀಕರತೆಯನ್ನು ತೋರಿಸುತ್ತಿದೆ. ಶೇ. 36-37 ಪಾಸಿಟಿವಿಟಿ ದರ ಕಾಣಿಸಿಕೊಳ್ಳುತ್ತಿದೆ. ಲಾಕ್​ಡೌನ್​ ವಿಸ್ತರಣೆ ಮಾಡಬೇಕೆಂದು ಜನರೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಏಪ್ರಿಲ್​ 26ಕ್ಕೆ ಮುಗಿಯಲಿರುವ ಲಾಕ್​ಡೌನ್​ನನ್ನು ಇನ್ನು ಒಂದು ವಾರದ ಕಾಲ (ಮುಂದಿನ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ) ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಪ್ರತಿದಿನ 20 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕರೊನಾ ಸೋಂಕು ದೃಢವಾಗುತ್ತಿದೆ. ಬಹುತೇಕ ಆಸ್ಪತ್ರೆಗಳಲ್ಲಿ ಆಕ್ಸಿಜನ್​ ಕೊರತೆ ಉಂಟಾಗಿದೆ. ಆಕ್ಸಿಜನ್​ ಕೊರತೆಯಿಂದಾಗಿ ನೂರಾರು ಜನರು ಸಾವನ್ನಪ್ಪುತ್ತಿರುವುದು ವರದಿಯಾಗಿದೆ. ರಾಜ್ಯದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ನಿಮ್ಮಲ್ಲಿರುವ ಹೆಚ್ಚುವರಿ ಆಕ್ಸಿಜನ್​ ಅನ್ನು ನಮಗೆ ನೀಡಿ ಎಂದು ಅರವಿಂದ್​ ಕೇಜ್ರಿವಾಲ್​ ಅವರು ಶನಿವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದರು. (ಏಜೆನ್ಸೀಸ್​)
ಕೋವಿಡ್‌ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಟ್ಯಾಂಕ್‌ ಸ್ಫೋಟ: 27 ಮಂದಿ ಸಜೀವ ದಹನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + thirteen =
Remember me
