ನವದೆಹಲಿ:ಕರೊನಾ ಮಹಾಮಾರಿ ವಿಶ್ವವನ್ನೇ ಆವರಿಸಲಾರಂಭಿಸುತ್ತಲೇ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಲಾಕ್​ಡೌನ್​ ಘೋಷಿಸಿದರು. ದೇಶದಲ್ಲಿ ಸೋಂಕು ಹರಡುವಿಕೆಯನ್ನು ಸಮರ್ಪಕವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಇದು ಸಾಮಾಜಿಕ ರೋಗನಿರೋಧಕ ಚುಚ್ಚುಮದ್ದಿನಂತೆ ಕೆಲಸ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್​ ಅಭಿಪ್ರಾಯಪಟ್ಟಿದ್ದಾರೆ.
ಭಾನುವಾರ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದ ಅವರು, ಲಾಕ್​ಡೌನ್​ಗೂ ಮುನ್ನ ದೇಶದಲ್ಲಿ 3.4 ದಿನಗಳಿಗೆ ಕರೊನಾ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುತ್ತಿತ್ತು. ಇದೀಗ ಲಾಕ್​ಡೌನ್​ ಘೋಷಿಸಿದ ನಂತರದಲ್ಲಿ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುವಿಕೆ 13 ದಿನಗಳಿಗೆ ವಿಸ್ತರಿಸಿದೆ ಎಂದು ಹೇಳಿದರು.
ಭಾರತದಲ್ಲಿ ಸರಿಯಾದ ಸಮಯದಲ್ಲಿ ಲಾಕ್​ಡೌನ್​ ಜಾರಿಗೊಳಿಸಲಾಯಿತು. ಆದರೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡಿದವು. ಪರಿಸ್ಥಿತಿ ಕೈಮೀರಿದ ಬಳಿಕ ತಮ್ಮ ದೇಶದಲ್ಲಿ ಲಾಕ್​ಡೌನ್​ ಘೋಷಿಸಿದವು. ಕೆಲವು ರಾಷ್ಟ್ರಗಳಲ್ಲಿ ಅರೆಬರೆಯಾಗಿ ಲಾಕ್​ಡೌನ್​ ಅನುಷ್ಠಾನಗೊಳಿಸಲಾಯಿತು. ಆ ರಾಷ್ಟ್ರಗಳು ಇದಕ್ಕೆ ತಕ್ಕ ಬೆಲೆ ತೆತ್ತವು ಎಂದು ತಿಳಿಸಿದರು.
ಉಮರಿಯ ರುದ್ರಪಶುಪತಿ ಶ್ರೀಗಳ ಕೊಲೆಗಾರನೊಬ್ಬನ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
