ಪಟನಾ:ದೇಶದಲ್ಲಿ ಕರೊನಾ ಸೋಂಕಿನ ತೀವ್ರತೆ ಹೆಚ್ಚಲಾರಂಭಿಸಿದ್ದು, ರಾಜ್ಯಗಳು ರಾಜ್ಯವ್ಯಾಪಿ ಲಾಕ್​ಡೌನ್​ ಹೋಗಲಾರಂಭಿಸಿವೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಈಗಾಗಲೇ ಲಾಕ್​ಡೌನ್​ ಜಾರಿಯಲ್ಲಿದೆ. ಇದೀಗ ಬಿಹಾರದಲ್ಲಿಯೂ ಲಾಕ್​ಡೌನ್​ ಮಾಡುವುದಾಗಿ ಸರ್ಕಾರ ಘೋಷಿಸಿದೆ.
ಸಂಪುಟ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಅವರೆಲ್ಲರ ಸಲಹೆಯ ಆಧಾರದ ಮೇರೆಗೆ ರಾಜ್ಯದಲ್ಲಿ ಮೇ 15ರವರೆಗೆ ಲಾಕ್​ಡೌನ್​ ಜಾರಿಯಲ್ಲಿರಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರದಂದು ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಮಾರ್ಗಸೂಚಿ ತಯಾರಿಸಲಾಗುತ್ತಿದ್ದು, ಶೀಘ್ರವೇ ಅದನ್ನು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಬಿಹಾರದಲ್ಲಿ ಸೋಮವಾರ 11,407 ಜನರಲ್ಲಿ ಕರೊನಾ ದೃಢವಾಗಿದೆ. ಈ ಮೂಲಕ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 5.09 ಲಕ್ಷಕ್ಕೆ ಏರಿಕೆಯಾಗಿದೆ. ರಾಜಧಾನಿ ಪಟನಾದಲ್ಲಿಯೇ ಹೆಚ್ಚಿನ ಸಂಖ್ಯೆಯ ಸೋಂಕಿತರು ಪತ್ತೆಯಾಗುತ್ತಿದ್ದಾರೆ. (ಏಜೆನ್ಸೀಸ್)
500 ರೂ. ರಿಫಂಡ್​ ನೆಪದಲ್ಲಿ 57 ಸಾವಿರ ರೂ. ಕನ್ನ! ಗೂಗಲ್​ ಸರ್ಚ್​ ಮಾಡೋ ಮುನ್ನ ಹುಷಾರ್​!

ಪ್ರಸಿದ್ಧ ನಟಿಯ ಸಹೋದರ ಕರೊನಾಗೆ ಬಲಿ! ಬೆಡ್​ಗಾಗಿ ಬೇಡಿಕೊಂಡಿದ್ದ ನಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + twelve =
Remember me
