ಭೋಪಾಲ್​:ದೇಶದ ಬಹುತೇಕ ರಾಜ್ಯಗಳಲ್ಲಿ ಕರೊನಾ ಸೋಂಕಿನ ತೀವ್ರತೆ ಹೆಚ್ಚಾಗಲಾರಂಭಿಸಿದ್ದು, ರಾಜ್ಯಗಳು ಲಾಕ್​ಡೌನ್​ ಮೊರೆ ಹೋಗಲಾರಂಭಿಸಿವೆ. ಇದೀಗ ಮಧ್ಯಪ್ರದೇಶ ಸರ್ಕಾರವೂ ಲಾಕ್​ಡೌನ್​ ಘೋಷಣೆ ಮಾಡಿದೆ.
ಮೇ 15ರವರೆಗೆ ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ತಿಳಿಸಿದ್ದಾರೆ. ಅಲ್ಲಿಯವರೆಗೆ ಅಗತ್ಯ ವಸ್ತು ಹೊರೆತುಪಡಿಸಿ ಬೇರೆಲ್ಲ ಅಂಗಡಿಗಳು ಬಾಗಿಲು ಮುಚ್ಚಿರಲಿವೆ. ದಯಮಾಡಿ ರಾಜ್ಯದ ಜನರು ಮನೆಯಿಂದ ಹೊರಬರಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಲಾಕ್​ಡೌನ್​ ಮಾಡಲೇ ಬೇಕಾದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಪಾಸಿಟಿವಿಟಿ ಪ್ರಮಾಣ ಅತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್​ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮದುವೆಗಳು ಸೂಪರ್ ಸ್ಪ್ರೆಡರ್​ ಆಗುತ್ತಿವೆ. ಹಾಗಾಗಿ ಮದುವೆ ಕಾರ್ಯಕ್ರಮಗಳನ್ನು ಆದಷ್ಟು ಮುಂದೂಡಿ ಎಂದು ಸಿಎಂ ಜನರಲ್ಲಿ ವಿನಂತಿಸಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಮೇ 5ರಂದು 89 ಸಾವಿರ ದಾಟಿದ್ದು, ಇನ್ನು ಕೆಲ ದಿನಗಳಲ್ಲಿ 1 ಲಕ್ಷ ದಾಟುವ ಸಾಧ್ಯತೆಯಿದೆ. (ಏಜೆನ್ಸೀಸ್)
ಭಾರತಕ್ಕೆ ಕರೊನಾ ಮೂರನೇ ಅಲೆ ಪ್ರವೇಶ ಯಾವತ್ತು ಗೊತ್ತಾ?; ಇಲ್ಲಿದೆ ನೋಡಿ ಮಾಹಿತಿ…

ಬೀಜದ ತೊಗಟೆ ಸೃಷ್ಟಿಯಾದದ್ದು ಹೇಗೆ? ಮರದ ಬಗ್ಗೆ ನಿಮಗೆ ಗೊತ್ತಿರದ ವಿಚಾರಗಳಿವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
