ನವದೆಹಲಿ:ಇದೀಗ ಏಪ್ರಿಲ್​ 14ರವರೆಗೆ ದೇಶಾದ್ಯಂತ ಜಾರಿಗೊಳಿಸಲಾಗಿರುವ ಕೋವಿಡ್​ 19 ಲಾಕ್​ಡೌನ್​ 14ರ ನಂತರವೂ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ದೇಶದ ಯಾವುದೇ ಭಾಗದಲ್ಲಿ ಒಂದೇ ಒಂದು ಸೋಂಕಿನ ಪ್ರಕರಣ ವರದಿಯಾಗದಿದ್ದರೆ ಮಾತ್ರ ಹಂತಹಂತವಾಗಿ ಲಾಕ್​ಡೌನ್​ ಅನ್ನು ಸಡಿಲಗೊಳಿಸುವ ಬಗ್ಗೆ ಕೇಂದ್ರ ಸಚಿವ ಸಂಪುಟ ಸಭೆ ಒಲವು ತೋರಿದೆ.
ಸೋಮವಾರದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಸಚಿವ ಪ್ರಕಾಶ್​ ಜಾವ್ಡೇಕರ್​, ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಲಾಕ್​ಡೌನ್​ ಅನ್ನು ಮುಂದುವರಿಸುವ ಅಥವಾ ಅಂತ್ಯಗೊಳಿಸವ ಬಗ್ಗೆ ಸಕಾಲದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಸ್ತುತ ದೇಶದಲ್ಲಿನ ಪರಿಸ್ಥಿತಿಯನ್ನು ಅನುಕ್ಷಣ ಗಮನಿಸಲಾಗುತ್ತಿದೆ. ಪರಿಸ್ಥಿತಿ ಸುಧಾರಿಸಿದ ಬಳಿಕ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
14ರ ನಂತರವೂ ಮುಂದುವರಿಸಲು ಆಗ್ರಹ:ರಾಷ್ಟ್ರದಲ್ಲಿ ಲಾಕ್​ಡೌನ್​ ಮುಂದುವರಿಸುವ ಬಗ್ಗೆ ಕೇಂದ್ರ ಸರ್ಕಾರ ಗೊಂದಲದ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಲಾಕ್​ಡೌನ್​ ಅನ್ನು 14ರ ನಂತರವೂ ಮುಂದುವರಿಸಬೇಕು ಎಂದು ತೆಲಂಗಾಣ ಸಿಎಂ ಚಂದ್ರಶೇಖರ ರಾವ್​ ಆಗ್ರಹಿಸಿದ್ದಾರೆ.
ಮೊದಲಿಗೆ ನಾವು ಜೀವಗಳನ್ನು ಉಳಿಸಬೇಕು. ಆನಂತರ ಬೇಕಾದರೆ ಆರ್ಥಿಕತೆಯನ್ನು ಪುನರುತ್ಥಾನಗೊಳಿಸಬಹುದು ಎಂದು ಹೇಳಿದ್ದಾರೆ.
ಪಾಕಿಸ್ತಾನದಲ್ಲೂ ಕರೊನಾ ವೈರಸ್​ ಸೋಂಕು ಹರಡಿದ ತಬ್ಲಿಘಿಗಳು: ಜಮಾತ್​ನಲ್ಲಿ ಪಾಲ್ಗೊಂಡಿದ್ದ 20 ಸಾವಿರ ಮಂದಿ ಕ್ವಾರಂಟೈನ್​ನಲ್ಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eight =
Remember me
