ಮುಂಬೈ:ದೇಶಾದ್ಯಂತ ಕರೊನಾ ಸೋಂಕಿತರ ಸಂಖ್ಯೆ ಹಿನ್ನೆಲೆಯಲ್ಲಿ ಹಲವು ರಾಜ್ಯಗಳು ಲಾಕ್​ಡೌನ್​ ಘೋಷಣೆ ಮಾಡಿಕೊಂಡಿವೆ. ಅದರಂತೆ ಮಹಾರಾಷ್ಟ್ರದಲ್ಲೂ ಲಾಕ್​ಡೌನ್​ ಜಾರಿಯಲ್ಲಿದೆ. ಈ ಲಾಕ್​ಡೌನ್​ ಈ ತಿಂಗಳ ಅಂತ್ಯದವರೆಗೂ ಮುಂದುವರಿಯಬಹುದು ಎಂದು ಮಹಾರಾಷ್ಟ್ರದ ರಾಜ್ಯ ಸಚಿವರು ತಿಳಿಸಿದ್ದಾರೆ.
ಕರೊನಾ ಸೋಂಕಿನ ವಿಚಾರದಲ್ಲಿ ಮಹಾರಾಷ್ಟ್ರದಲ್ಲಿ ಆಗಾಗ ಕ್ಯಾಬಿನೆಟ್​ ಸಭೆ ನಡೆಸಲಾಗುತ್ತಿದೆ. ಅದರಂತೆ ಬುಧವಾರದಂದೂ ಸಭೆ ನಡೆದಿದ್ದು, ಅದರಲ್ಲಿ ಲಾಕ್​ಡೌನ್​ ವಿಚಾರವಾಗಿ ಮತ್ತೆ ಚರ್ಚೆಯಾಗಿದೆ. ಬಹುತೇಕರು ಲಾಕ್​ಡೌನ್​ ವಿಸ್ತರಣೆ ಅತ್ಯಗತ್ಯ ಎನ್ನುವ ಸಲಹೆ ನೀಡಿದ್ದಾರೆ. ಎಲ್ಲರ ಸಲಹೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಲಾಕ್​ಡೌನ್​ ಅನ್ನು ಮೇ 31ರವರೆಗೆ ಮುಂದುವರಿಸುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ ರಾಜೇಶ್​ ತೋಪೆ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಇಂದು 46,781 ಪ್ರಕರಣ ದಾಖಲಾಗಿದ್ದರೆ 816 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಪಾಸಿಟಿವಿಟಿ ಪ್ರಮಾಣ ಶೇ. 17.36ರಷ್ಟಿದ್ದರೆ ಮರಣ ಪ್ರಮಾಣ ಶೇ. 1.49ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. (ಏಜೆನ್ಸೀಸ್)
ಗಿಡಗಳಿಗೆ ನೀರನ್ನು ಬೆಳಗ್ಗೆಯೇ ಏಕೆ ಕೊಡಬೇಕು? ನೀವೆಲ್ಲರೂ ತಿಳಿದುಕೊಳ್ಳಲೇಬೇಕಾದ ವಿಚಾರವಿದು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − five =
Remember me
