ಮುಂಬೈ: ಕ್ಷಣ ಕ್ಷಣಕ್ಕೂ ಕರೊನಾ ವೈರಸ್‌ ತನ್ನ ಭಯಾನಕ ರೂಪವನ್ನು ತೋರುತ್ತಲೇ ಸಾಗಿದೆ. ಅದರಲ್ಲಿಯೂ ಮಹಾರಾಷ್ಟ್ರದಲ್ಲಂತೂ ಇದರ ಭೀಕರತೆ ಇನ್ನಷ್ಟು ಹೆಚ್ಚಾಗಿದೆ.ಈಚೆಗಷ್ಟೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ರಾಜ್ಯದಲ್ಲಿ ಕರೊನಾ ಬಿಕ್ಕಟ್ಟು ಮುಗಿದಿಲ್ಲ, ಸರ್ಕಾರದ ನಿಯಮಗಳನ್ನು ಪಾಲಿಸಿ, ಲಾಕ್‌ಡೌನ್‌ ಮತ್ತೆ ವಿಧಿಸದಂತೆ ನೋಡಿಕೊಳ್ಳಿ ಎಂದು ಹೇಳಿದ್ದರು.
ಆದರೆ, ಪರಿಸ್ಥಿತಿ ಕೈಮೀರಿ ಹೋಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಲಾಕ್‌ಡೌನ್‌ ವಿಸ್ತರಣೆ ಮಾಡಿದೆ. ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜುಲೈ 31ರವರೆಗೂ ಲಾಕ್‌ಡೌನ್‌ ವಿಸ್ತರಣೆ ಅನಿವಾರ್ಯ ಎಂದು ಉದ್ಧವ್‌ ಠಾಕ್ರೆ ಘೋಷಣೆ ಮಾಡಿದ್ದಾರೆ. ಇಂದು ಈ ಕುರಿತು ಸೂಚನೆ ಹೊರಬಿದ್ದಿದ್ದು ಜುಲೈ 31ರವರೆಗೂ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ ಪಾಲನೆ ಮಾಡುವಂತೆ ಜನರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಮಾಸ್ಕ್ ಹಾಕದಿದ್ದರೆ ದಂಡ ಖಚಿತ
ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅನಗತ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಹೊರಗಡೆ ಓಡಾಡುವುದು ಸಹ ನಿರ್ಬಂಧಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಇನ್ನು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ ಎಂದು ಎಚ್ಚರಿಕೆ ನೀಡಿರುವ ಸರ್ಕಾರ ಉಲ್ಲಂಘಿಸಿದರೆ ಕ್ರಮ ಜರುಗಿಸಲಾಗುವುದು ಎಂದಿದೆ.ಕಳೆದ 15 ದಿನಗಳಿಂದ ಮಹಾರಾಷ್ಟ್ರದಲ್ಲಿ ಆರ್ಥಿಕ ಚಟುವಟಿಕೆ ನಿಧಾನವಾಗಿ ಆರಂಭವಾಗಿತ್ತು. ಅಂಗಡಿ ಮುಗ್ಗಟ್ಟುಗಳು ತೆರೆಯಲಾರಂಭಿಸಿದ್ದವು.. ಸಾಂಕ್ರಾಮಿಕ ರೋಗದ ನಡುವೆಯೂ ಜಾಗರೂಕತೆಯಿಂದ ಜೀವನ ಮಾಡಬೇಕಾದ ಅನಿವಾರ್ಯತೆ ಇದೆ. ಅಪಾಯ ತಪ್ಪಿಲ್ಲ. ಅವಶ್ಯಕತೆ ಇದ್ದರೆ ಮಾತ್ರ ಹೊರಗೆ ಬನ್ನಿ ಎಂದು ಸಿಎಂ ವಿನಂತಿಸಿದ್ದರು. ಆದರೆ ಇದೀಗ ಪರಿಸ್ಥಿತಿಯನ್ನು ನೋಡಿ ಲಾಕ್‌ಡೌನ್ ಅನಿವಾರ್ಯ ಎಂದು ಘೋಷಣೆ ಮಾಡಲಾಗಿದೆ.
ಸದ್ಯ, ಮಹಾರಾಷ್ಟ್ರದಲ್ಲಿ 1,64,626 ಜನರು ಕರೊನಾ ಸೋಂಕಿತರಾಗಿದ್ದಾರೆ.. ಇದರಲ್ಲಿ 70,607 ಕೇಸ್ ಸಕ್ರಿಯವಾಗಿದೆ. 86,575 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೂ 7,429 ಜನರಿಗೆ ಕೊರೊನಾಗೆ ಬಲಿಯಾಗಿದ್ದಾರೆ.
ಇದಾಗಲೇ ಜಾರ್ಖಂಡ್‌ ಮತ್ತು ಪಶ್ಚಿಮ ಬಂಗಾಳದಲ್ಲಿಯೂ ಜುಲೈ 31ರವರೆಗೆ ಲಾಕ್‌ಡೌನ್‌ ವಿಸ್ತರಣೆ ಮಾಡಲಾಗಿದೆ.
ಅಡ್ಮಿಟ್‌ ವಿಳಂಬದಿಂದ ಸೋಂಕಿತನ ಸಾವು: ಆಸ್ಪತ್ರೆಗೆ ಬಿತ್ತು ₹ 77 ಲಕ್ಷ ಭಾರಿ ದಂಡ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen + 11 =
Remember me
