ಮಹಾರಾಷ್ಟ್ರ:ಕರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನ. 30ರ ವರೆಗೂ ಲಾಕ್​ಡೌನ್​ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ‘ಮಿಷನ್ ಬಿಗಿನ್ ಅಗೇನ್​’ ಎಂಬ ಘೋಷವಾಕ್ಯದೊಂದಿಗೆ ಸರ್ಕಾರ ಇಂಥದ್ದೊಂದು ನಿರ್ಧಾರ ಪ್ರಕಟಿಸಿದೆ.
ರಾಜ್ಯಾದ್ಯಂತ ಕರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್ ನ. 30ರ ವರೆಗೂ ಮುಂದುವರಿಯಲಿದೆ. ರಾಜ್ಯಾದ್ಯಂತ ಎಲ್ಲ ಇಲಾಖೆಗಳು ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಗುರುವಾರ ಸೂಚನೆ ನೀಡಿದೆ. ಈಗ ಮುಕ್ತವಾಗಿರುವ ಎಲ್ಲ ಚಟುವಟಿಕೆಗಳು ಎಂದಿನಂತೆ ನಡೆಯಲಿವೆ. ಉಳಿದಂತೆ ಈ ಹಿಂದಿನ ಎಲ್ಲ ನಿಯಮ-ನಿರ್ಬಂಧಗಳೂ ಜಾರಿಯಲ್ಲಿ ಇರಲಿವೆ ಎಂದು ಸರ್ಕಾರ ತಿಳಿಸಿದೆ.
ಕೋವಿಡ್​-19 ಸೋಂಕು ಕ್ಷಿಪ್ರಗತಿಯಲ್ಲಿ ಹೆಚ್ಚುತ್ತಿರುವುದು ಸರ್ಕಾರವನ್ನು ಚಿಂತೆಗೀಡುಮಾಡಿದೆ. ಹೀಗಾಗಿ ಸೋಂಕು ಹರಡುವಿಕೆ ತಡೆ ಹಾಗೂ ನಿಯಂತ್ರಣಕ್ಕೆ ತುರ್ತು ಕ್ರಮ ಮತ್ತು ನಿರ್ಬಂಧ ಕೈಗೊಳ್ಳುವುದು ಅನಿವಾರ್ಯ. ಹೀಗಾಗಿ ಸದ್ಯ ಜಾರಿಯಲ್ಲಿರುವ ಲಾಕ್​ಡೌನ್​ ನ. 30ರ ಮಧ್ಯರಾತ್ರಿ ವರೆಗೂ ಮುಂದುವರಿಯಲಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
