ನವದೆಹಲಿ:ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 23 ಬಿಜೆಪಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ನೇಮಿಸಲಾಗಿದೆ.
ಇದನ್ನೂ ಓದಿ:ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್​​ಗೆ ‘ಝೆಡ್’ ಶ್ರೇಣಿ ಭದ್ರತೆ
भारतीय जनता पार्टी के राष्ट्रीय अध्यक्ष श्री@JPNaddaने आगामी लोकसभा चुनाव के लिए निम्नलिखित राज्यों में प्रदेश चुनाव प्रभारी एवं सह-चुनाव प्रभारी की नियुक्ति की है।pic.twitter.com/1hpPH4cNsa
— BJP (@BJP4India)January 27, 2024

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ಮತ್ತು ಸುಧಾಕರ್ ರೆಡ್ಡಿ ಅವರನ್ನು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಶನಿವಾರ ಆದೇಶ ಹೊರಡಿಸಿದೆ.
ಮಹಾರಾಷ್ಟ್ರದ ಬಿಜೆಪಿ ಮುಖಂಡ ವಿನೋದ್‌ ತಾವ್ಡೆ ಅವರನ್ನು ಬಿಹಾರದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ. ಬೈಜಯಂತ್‌ ಪಾಂಡಾ ಅವರನ್ನು ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಿ ನೇಮಿಸಲಾಗಿದೆ.
ವಿಜಯಪಾಲ್ ತೋಮರ್ ಅವರನ್ನು ಒಡಿಶಾ ಹಾಗೂ ಶ್ರೀಕಾಂತ್ ಶರ್ಮಾ ಅವರನ್ನು ಹಿಮಾಚಲದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರದ ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ದಕ್ಷಿಣ ರಾಜ್ಯ ಕೇರಳದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್​​ಗೆ ‘ಝೆಡ್’ ಶ್ರೇಣಿ ಭದ್ರತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + three =
Remember me
