ನವದೆಹಲಿ:ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ (ಏಳನೇ ಹಂತ) ಜೂನ್​ 02ರಂದು ಕೊನೆಗೊಂಡಿದ್ದು, ಮತದಾನ ಮುಗಿದ ಕೆಲವೇ ಕ್ಷಣಗಳಲ್ಲಿ ಹಲವು ಮಾಧ್ಯಮಗಳು ಎಕ್ಸಿಟ್​ ಪೋಲ್​ ವರದಿಗಳನ್ನು ಬಿತ್ತರಿಸಿವೆ. ಇತ್ತ ಎಕ್ಸಿಟ್​ ಪೋಲ್​ ವರದಿ ಬಿಡುಗಡೆಯಾಗುತ್ತಿದ್ದಂತೆ ರಾಜಕೀಯ ನಾಯಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರೊಬ್ಬರು ನೀಡಿರುವ ಹೇಳಿಕೆ ಸಖತ್​ ವೈರಲ್​ ಆಗುತ್ತಿದೆ.
ಆಮ್​ ಆದ್ಮಿ ಪಕ್ಷದ ಹಿರಿಯ ನಾಯಕ ಸೋಮನಾಥ್ ಭಾರತಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ನಾನು ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ. ಇವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ಟೀಕಿಸಿ ಕಮೆಂಟ್​ ಮಾಡುತ್ತಿದ್ದಾರೆ.
I will shave off my head if Mr Modi becomes PM for the third time.Mark my word!All exit polls will be proven wrong on 4th June and Modi ji will not become prime minister for the third time.In Delhi, all seven seats will go to India ALLIANCE.Fear of Mr Modi does not allow…
ಇದನ್ನೂ ಓದಿ:ಭಾರತ-ಪಾಕ್​ ನಡುವಿನ ಹೈವೋಲ್ಟೇಜ್​ ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಕಾರಣ ಹೀಗಿದೆ
ಈ ಕುರಿತು ಮಾತನಾಡಿರುವ ಸೋಮನಾಥ್​ ಭಾರತಿ, ನನ್ನ ಮಾತನ್ನು ನೆನಪಿಟ್ಟುಕೊಳ್ಳಿ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ನಾನು ನನ್ನ ತಲೆ ಬೋಳಿಸಿಕೊಳ್ಳುತ್ತೇನೆ. ಸದ್ಯ ಪ್ರಕಟವಾಗಿರುವ ಎಕ್ಸಿಟ್​ ಪೋಲ್​ಗಳ ವರದಿಯು ಜೂನ್​ 04ರಂದು ಸುಳ್ಳಾಗುತ್ತವೆ. ನರೇಂದ್ರ ಮೋದಿ ಮೂರನೇ ಭಾರಿ ಪ್ರಧಾನಿಯಾಗುವುದಿಲ್ಲ.
ದೆಹಲಿಯ ಎಲ್ಲಾ ಏಳು ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಮೋದಿಯ ಭಯದಿಂದಾಗಿ ಎಕ್ಸಿಟ್​ ಪೋಲ್​ಗಳು ಸುಳ್ಳು ವರದಿಗಳನ್ನು ಪ್ರಕಟಿಸಿವೆ. ಜೂನ್​ 04ರಂದು ನಿಜವಾದ ಫಲಿತಾಂಶ ಪ್ರಕಟವಾಗಲಿದ್ದು, ನಾವೆಲ್ಲರೂ ಅದಕ್ಕಾಗಿ ಕಾಯಬೇಕಿದೆ. ಇಂಡಿಯಾ ಮೈತ್ರಿಕೂಟವು ಸ್ಥಿರ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 + nineteen =
Remember me
