ಕಲ್ಕತ್ತಾ:ಮುಂದಿನ ಲೋಕಸಭೆ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಬಿಜೆಪಿ ಭರ್ಜರಿ ತಯಾರಿಯನ್ನು ನಡೆಸಿದೆ. ಆದರೆ, ವಿಪಕ್ಷಗಳ ಮೈತ್ರಿಕೂಟ ಇಂಡಿಯಾದಲ್ಲಿ ಮಾತ್ರ ಯಾಕೋ ಎಲ್ಲವೂ ಸರಿ ಇಲ್ಲದಿರುವುದು ಸ್ಪಷ್ಟವಾಗಿ ಗೋಚರವಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್​ಗೆ ಮತ್ತೊಮ್ಮೆ ಹಿನ್ನಡೆಯಾಗಿದ್ದು, ಈ ಬಾರಿ ಟಿಎಂಸಿ ಮೇಲುಗೈ ಸಾಧಿಸಿದೆ.
ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಫರ್ಧಿಸಲಿದ್ದು, ಅಸ್ಸಾಂ ಹಾಗೂ ಮೇಘಾಲಯದಲ್ಲೂ ತಮ್ಮ ಪಕ್ಷ ಕಣಕ್ಕಿಳಿಯಲಿದೆ ಎಂದು ರಾಜ್ಯಸಭಾ ಸದಸ್ಯ ಡೆರೆಕ್​ ಒ’ಬ್ರೇನ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಡೆರೆಕ್​, ಲವು ವಾರಗಳ ಹಿಂದೆ, ಟಿಎಂಸಿ ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಂಗಾಳದ ಎಲ್ಲಾ 42 ಸ್ಥಾನಗಳಲ್ಲಿ ಟಿಎಂಸಿ ಸ್ಫರ್ಧಿಸುತ್ತದೆ ಎಂದು ಹೇಳಿದ್ದರು. ನಾವು ಅಸ್ಸಾಂನ ಕೆಲವು ಸ್ಥಾನಗಳಲ್ಲಿ ಮತ್ತು ಮೇಘಾಲಯದ ತುರಾ ಲೋಕಸಭಾ ಕ್ಷೇತ್ರದಲ್ಲಿಯೂ ಸ್ಫರ್ಧಿಸುತ್ತೇವೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಪ್ರಮುಖ ದಾಖಲೆ ಬರೆದ ಆರ್. ಅಶ್ವಿನ್; ಏನದು?
ನಾನು ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ, ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಸ್ಫರ್ಧಿಸುತ್ತೇನೆ. ನಾನು ಯಾವಾಗಲೂ ಹೇಳುತ್ತೇನೆ, ದೇಶದಲ್ಲಿ ಏನು ಮಾಡಲಾಗುವುದು ಎಂಬುದರ ಬಗ್ಗೆ ನನಗೆ ಕಾಳಜಿ ಇಲ್ಲ ಆದರೆ ನಾವು ಜಾತ್ಯತೀತ ಪಕ್ಷ ಹಾಗಾಗಿ ಬಂಗಾಳದಲ್ಲಿ ಬಿಜೆಪಿಯನ್ನು ಏಕಾಂಗಿಯಾಗಿ ಸೋಲಿಸುತ್ತೇವೆ ಎಂದು ಈ ಹಿಂದೆ ಮಮತಾ ಬ್ಯಾನರ್ಜಿ ಹೇಳಿದ್ದರು.
ಇತ್ತ ತೃಣಮೂಲ ಕಾಂಗ್ರೆಸ್​ನ ಈ ನಡೆ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ದೊಡ್ಡ ಹಿನ್ನಡೆಯನ್ನುಂಟು ಮಾಡಿದ್ದು, ಮುಂದಿನ ದಿನಗಳಲ್ಲಿ ಇಂಡಿಯಾ ಬಣದ ನಾಯಕರು ಇದನ್ನು ಹೇಗೆ ಸಂಭಾಲಿಸಲಿದ್ದಾರೆ ಎಂದು ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
