ಬೆಂಗಳೂರು:ಲೋಕಸಭಾ ಚುನಾವಣೆಯ ಮೊದಲ ಹಂತದ ಬಹಿರಂಗ ಪ್ರಚಾರ ಬುಧವಾರ ಸಂಜೆ 6 ಗಂಟೆಗೆ ಕೊನೆಗೊಂಡಿದೆ. ಆದರೆ ಐದು ಮಂದಿ ಮಾತ್ರ ಮನೆ ಮನೆ ಪ್ರಚಾರ ಮಾಡಬಹುದಾಗಿದೆ.
ಇದನ್ನೂ ಓದಿ:‘ಕಲ್ಕಿ’ಯಲ್ಲಿ ‘ಅಶ್ವತ್ಥಾಮ’ನಾದ ಅಮಿತಾಭ್: ಟೀಸರ್ ​ರಿಲೀಸ್​..ಹೆಚ್ಚಿದ ಕುತೂಹಲ!
ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬಿದ್ದಿದೆ. ರಾಜಕೀಯ ನಾಯಕರು, ಅಭ್ಯರ್ಥಿಗಳು ಪ್ರಚಾರದ ಕಣಕ್ಕಿಳಿದು ತಮ್ಮ ಸಾಮರ್ಥ್ಯ, ಸಾಧನೆ, ಎದುರಾಳಿಯ ವೈಫಲ್ಯಗಳನ್ನು ಹೇಳುವ ಮೂಲಕ ಮತದಾರರ ಮನವೊಲಿಸಲು ಪ್ರಯತ್ನ ನಡೆಸಿದ್ದರು.
ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯಲಿರುವ 14 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಧ್ವನಿವರ್ಧಕ, ಪ್ರಚಾರ ವಾಹನ, ಭಾಷಣ, ಬಹಿರಂಗ ಸಮಾವೇಶ, ರೋಡ್ ಶೋ ನಡೆಸುವಂತಿಲ್ಲ.
ಗುರುವಾರ ನಿಗದಿತ ಸಂಖ್ಯೆಯ ಬೆಂಬಲಿಗರೊಂದಿಗೆ ಮತದಾರರ ಮನೆ ಬಾಗಿಲಿಗೆ ತೆರಳಲಿರುವ ಅಭ್ಯರ್ಥಿಗಳು, ಮನವೊಲಿಕೆಗೆ ಅಂತಿಮ ಹಂತದ ಕಸರತ್ತನ್ನು ನಡೆಸಲಿದ್ದಾರೆ.
ಈ ಕ್ಷೇತ್ರಗಳಲ್ಲಿ ಮತದಾನ:ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ.
ನಿಷೇಧಾಜ್ಞೆ, ಮದ್ಯ ಮಾರಾಟ ಇಲ್ಲ:ಬುಧವಾರ ಸಂಜೆ 6 ಗಂಟೆಯಿಂದ ಶುಕ್ರವಾರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಮನೆ ಮನೆ ಪ್ರಚಾರ ನಡೆಸುವಾಗಲೂ ಅಭ್ಯರ್ಥಿಗಳು ಧ್ವನಿವರ್ಧಕ ಬಳಕೆ ಮಾಡುವ ಹಾಗಿಲ್ಲ. ಅಲ್ಲದೆ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ. ಬುಧವಾರ ಸಂಜೆ 6 ಗಂಟೆ ಬಳಿಕ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರಲ್ಲದ ಯಾವ ರಾಜಕಾರಣಿಗಳೂ ಉಳಿಯುವ ಹಾಗಿಲ್ಲ.
Success Story: ಅಬ್ಬಬ್ಬಾ..ಕೈಗಳಿಲ್ಲ, ಕಾಲಲ್ಲೇ ಕಾರು ಡ್ರೈವ್​ ಮಾಡ್ತಾಳೆ! ಡಿಎಲ್​ ಪಡೆದ ಏಷ್ಯಾದ ಮೊದಲಿಗಳು ಈಕೆ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 10 =
Remember me
