ಕಲ್ಕತ್ತಾ:ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಭರಾಟೆ ಜೋರಾಗಿದ್ದು, ಇಂದು (ಜೂನ್ 01) ಏಳನೇ ಹಂತದ ಮತದಾನ ನಡೆಯುತ್ತಿದೆ. ಏಳನೇ ಹಂತದಲ್ಲಿ ಒಟ್ಟು 57 ಲೋಕಸಭೆ ಕ್ಷೇತ್ರಗಳು ಒಳಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಪಂಜಾಬ್​ ಸಿಎಂ ಭಗವಂತ್​ ಮಾನ್, ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಬಾಲಿವುಡ್​ ನಟಿ ಕಂಗನಾ ರಣಾವತ್​ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಸದಾ ಗದ್ದಲ ಹಾಗೂ ಗಲಭೆಗಳಿಂದಲೇ ಹೆಚ್ಚು ಅಪಖ್ಯಾತಿ ಪಡೆದಿರುವ ಪಶ್ಚಿಮ ಬಂಗಾಳದಲ್ಲಿ ದುಷ್ಕರ್ಮಿಗಳ ಗುಂಪೊಂದು ವೋಟಿಂಗ್​ ಮೆಷಿನ್​ ಹಅಗೂ ವಿವಿಪ್ಯಾಟ್​ಅನ್ನು ಚರಂಡಿಗೆ ಎಸೆದಿರುವ ಘಟನೆ ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿ ಮತಗಟ್ಟೆಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು, ಇಂದು (ಜೂನ್ 01) ಬೆಳಿಗ್ಗೆ 6.40ರ ಸುಮಾರಿಗೆ ಬೇನಿಮಾಧವಪುರ ಎಫ್‌ಪಿ ಶಾಲೆಯ ಬಳಿ ಸೆಕ್ಟರ್ ಆಫೀಸರ್‌ನ ಮೀಸಲು ಇವಿಎಂಗಳು ಮತ್ತು ಪೇಪರ್‌ಗಳನ್ನು, ಸ್ಥಳೀಯ ಜನರು ಲೂಟಿ ಮಾಡಿದ್ದಾರೆ. 2 VVPAT ಯಂತ್ರಗಳನ್ನು ಚರಂಡಿಗೆ ಎಸೆಯಲಾಗಿದೆ. ಸೆಕ್ಟರ್ ಅಧಿಕಾರಿ ಎಫ್‌ಐಆರ್ ದಾಖಲಿಸಿದ್ದಾರೆ. ಸೆಕ್ಟರ್‌ನ ಎಲ್ಲಾ ಆರು ಬೂತ್‌ಗಳಲ್ಲಿ ಹೊಸ ಇವಿಎಂ ಮತ್ತು ಪೇಪರ್‌ಗಳನ್ನು ಒದಗಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
VIDEO | Lok Sabha Elections 2024: EVM and VVPAT machine were reportedly thrown in water by a mob at booth number 40, 41 in Kultai, South 24 Parganas,#WestBengal.(Source: Third Party)#LSPolls2024WithPTI#LokSabhaElections2024pic.twitter.com/saFiNcG3e4
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
