ಲಖನೌ:ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಶುಕ್ರವಾರ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರೊಂದಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್ ಉಪಸ್ಥಿತರಿದ್ದರು.
ಇದನ್ನೂ ಓದಿ:ಕಿಂಗ್ ನಾಗಾರ್ಜುನ ಕುಬೇರ’ ಫಸ್ಟ್‌ ಲುಕ್ ನೋಡಿ ಫ್ಯಾನ್ಸ್ ಫುಲ್ ಥ್ರಿಲ್!
ಇಂದು ( ಶುಕ್ರವಾರ) ಬೆಳಗ್ಗೆಯಷ್ಟೇ ಕಾಂಗ್ರೆಸ್ ಪಕ್ಷವು ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿತ್ತು. ಇದಾದ ಕೆಲವೇ ಹೊತ್ತಿನ ನಂತರ ರಾಹುಲ್ ಗಾಂಧಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಮೇಥಿ ಮತ್ತು ರಾಯ್‌ಬರೇಲಿ ಅಭ್ಯರ್ಥಿಗಳ ವಿಚಾರದಲ್ಲಿ ಕಾಂಗ್ರೆಸ್ ನಡೆ ಕುತೂಹಲ ಮೂಡಿಸಿತ್ತು. ಕೊನೆಗೂ ಈ ಸಸ್ಪೆನ್ಸ್‌ಗೆ ಶುಕ್ರವಾರ ಬೆಳಗ್ಗೆ ತೆರೆಬಿದ್ದಿದೆ.
#WATCH| Uttar Pradesh: Congress MP Rahul Gandhi files nomination from Raebareli for the upcoming#LokSabhaElection2024
BJP has fielded Dinesh Pratap Singh from Raebareli.pic.twitter.com/R0IYOCnJA1
— ANI (@ANI)May 3, 2024

ಈ ಎರಡೂ ಕ್ಷೇತ್ರಗಳ ಪೈಕಿ ಅಮೇಥಿಯಲ್ಲಿ ರಾಹುಲ್ ಮತ್ತು ರಾಯ್‌ಬರೇಲಿಯಲ್ಲಿ ಪ್ರಿಯಾಂಕಾ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ರಾಹುಲ್ ಗಾಂಧಿ ಅವರು ಹಾಲಿ ಸಂಸದರಾಗಿರುವ ಕೇರಳದ ವಯನಾಡು ಕ್ಷೇತ್ರದಿಂದಲೂ ಸ್ಪರ್ಧಿಸಿದ್ದು, ಈಗಾಗಲೇ ಅಲ್ಲಿ ಮತದಾನ ನಡೆದಿದೆ. ಆದರೆ ಎಡಪಕ್ಷಗಳು ಮೈತ್ರಿ ಒಪ್ಪಂದಕ್ಕೆ ಒಪ್ಪದೆ ಅಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಹೀಗಾಗಿ ರಾಹುಲ್ ಗಾಂಧಿ ಅವರಿಗೆ ಅಲ್ಲಿ ಗೆಲುವು ಸುಲಭವಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಇನ್ನೊಂದು ಸುರಕ್ಷಿತ ಕ್ಷೇತ್ರ ಹುಡುಕುವುದು ಅನಿವಾರ್ಯವಾಗಿತ್ತು.
ಏಳು ಹಂತದ ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮೇ 20 ರಂದು ಮತದಾನ ನಡೆಯಲಿರುವ ಸ್ಥಾನಗಳಿಗೆ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೀಗಾಗಿ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಇಂದು ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್ ಉಪಸ್ಥಿತರಿದ್ದರು.
ರಾಹುಲ್‌ಗೆ ದಿನೇಶ್ ಪ್ರತಾಪ್ ಸಿಂಗ್ ಸವಾಲು:ರಾಯ್‌ಬರೇಲಿ ಕ್ಷೇತ್ರದಿಂದ ಬಿಜೆಪಿಯು ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ದಿನೇಶ್ ಪ್ರತಾಪ್ ಸಿಂಗ್ ಅವರು ಪ್ರಸ್ತುತ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಚಿವರಾಗಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿಯೂ ಅವರು ಸೋನಿಯಾ ಗಾಂಧಿ ಎದುರು ಸ್ಪರ್ಧಿಸಿ ಸೋತಿದ್ದರು. “ನಾನು ಸೋನಿಯಾ ಗಾಂಧಿ ವಿರುದ್ಧ ಹೋರಾಡಿದ್ದೇನೆ. ಹೀಗಾಗಿ ಈಗ ಪ್ರಿಯಾಂಕಾ ಅಥವಾ ರಾಹುಲ್ ಗಾಂಧಿ ಯಾರೇ ಬರಲಿ, ನನಗೆ ಮುಖ್ಯವಲ್ಲ. ಯಾವ ಗಾಂಧಿ ಬಂದರೂ ರಾಯ್‌ಬರೇಲಿಯಲ್ಲಿ ಸೋಲುತ್ತಾರೆ” ಎಂದು ದಿನೇಶ್ ಪ್ರತಾಪ್ ಸಿಂಗ್ ಸವಾಲು ಹಾಕಿದ್ದಾರೆ.
ಅಮೇಠಿ ಕೈ ಅಭ್ಯರ್ಥಿ ನಾಮಪತ್ರ ಸಲ್ಲಿಕೆ:ಅಮೇಠಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅವರು ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ಹಿಂದೆ ಪ್ರಿಯಾಂಕಾ ಗಾಂಧಿ ಅಮೇಥಿಯಿಂದ ಚುನಾವಣೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹ ಇತ್ತು. ಆದರೆ ಪಟ್ಟಿ ಬಿಡುಗಡೆಯಾದ ನಂತರ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ.
ಪ್ರಜ್ವಲ್​ರಿಂದ 400 ಮಹಿಳೆಯರ ಅತ್ಯಾಚಾರ: ಪ್ರಧಾನಿ ಮೋದಿ ಕ್ಷಮೆಯಾಚಿಸಲು ರಾಹುಲ್ ಒತ್ತಾಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 2 =
Remember me
