ನವದೆಹಲಿ:ಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ದಾಖಲೆಯಾಗಿ ಪರಿಗಣಿಸಬಹುದು. ಆ ನಿಟ್ಟಿನಲ್ಲಿ ಸಂಸತ್ತಿನಲ್ಲಿ ಇಂದು ಮಹತ್ವದ ಮಸೂದೆಯೊಂದು ಅಂಗೀಕಾರಗೊಂಡಿದೆ. ಅರ್ಥಾತ್​, ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕೃತಗೊಂಡಿದೆ.
ಈ ತಿದ್ದುಪಡಿಯು ಇನ್ನುಮುಂದೆ ಜನನ ಪ್ರಮಾಣಪತ್ರವನ್ನೇ ಏಕೈಕ ದಾಖಲೆಯಾಗಿ ಪರಿಗಣಿಸುವಲ್ಲಿ ನೆರವಾಗಲಿದೆ. ಅಂದರೆ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ, ಚಾಲನ ಪರವಾನಗಿ, ಮತದಾರರ ಗುರುತಿನ ಚೀಟಿ, ಆಧಾರ್ ನಂಬರ್​, ಮದುವೆ ನೋಂದಣಿ ಮಾತ್ರವಲ್ಲ ಸರ್ಕಾರಿ ಉದ್ಯೋಗದ ನೇಮಕಾತಿ ಎಲ್ಲದಕ್ಕೂ ಜನನ ಪ್ರಮಾಣಪತ್ರವೇ ದಾಖಲೆಯನ್ನಾಗಿ ನೀಡಬಹುದು.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಮಣಿಪುರ ಪ್ರಕರಣದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಎದ್ದ ಗದ್ದಲದ ನಡುವೆಯೂ ಈ ಮಸೂದೆಯನ್ನು ಅಂಗೀಕರಿಸಲಾಯಿತು. ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ, ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಮಸೂದೆ-2023 ನೋಂದಾಯಿತ ಜನನ ಮತ್ತು ಮರಣಗಳ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಡೇಟಾಬೇಸ್ ರಚಿಸಲು ಸಹಾಯ ಮಾಡುತ್ತದೆ ಎಂದರು. ಇದು ಅಂತಿಮವಾಗಿ ಸಾರ್ವಜನಿಕ ಸೇವೆಗಳು, ಸಾಮಾಜಿಕ ಪ್ರಯೋಜನಗಳು ಮತ್ತು ಡಿಜಿಟಲ್ ನೋಂದಣಿಯ ಪರಿಣಾಮಕಾರಿ ಮತ್ತು ಪಾರದರ್ಶಕ ವಿತರಣೆಯನ್ನು ಖಚಿತಪಡಿಸುತ್ತದೆ ಎಂದೂ ಹೇಳಿದರು.
ಸಾಕ್ಷರತೆ, ಆರೋಗ್ಯ ಸೂಚ್ಯಂಕ ಎರಡರಲ್ಲೂ ದಕ್ಷಿಣಕನ್ನಡ-ಉಡುಪಿ ಹಿಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಿಎಂ
ನಿದ್ರಿಸಲು ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕೇಸು ದಾಖಲಿಸಬಹುದಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 16 =
Remember me
