ನವದೆಹಲಿ:ಬ್ರಿಟಿಷರ ಕಾಲದ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ ಮೂರು ಹೊಸ ಮಸೂದೆಗಳು ಬುಧವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡವು. ರೇಪಿಸ್ಟ್‌ಗಳಿಗೆ 20 ವರ್ಷ ಜೈಲು, ‘ದೇಶದ್ರೋಹ’ ಕಾನೂನು ಮಾರ್ಪಾಡು, ಗುಂಪು ಹತ್ಯೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲು ಹೊಸ ಕಾನೂನು ಅನುವು ಮಾಡಿಕೊಡುತ್ತದೆ.
ಇದನ್ನೂ ಓದಿ:ಮೆಟ್ರೋ ರೈಲಿಗೆ ಸೀರೆ ಸಿಲುಕಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ 15ಲಕ್ಷ ರೂ.ಪರಿಹಾರ
1860ರ ಭಾರತೀಯ ದಂಡ ಸಂಹಿತೆ (ಐಪಿಸಿ), 1973ರ ಕ್ರಿಮಿನಲ್ ಪ್ರಕ್ರಿಯೆ ಸಂಹಿತೆ (ಸಿಆರ್‌ಪಿಸಿ) ಹಾಗೂ 1872ರ ಭಾರತೀಯ ಸಾಕ್ಷ್ಯ ಕಾಯ್ದೆಗಳ ಬದಲಿಗೆ ಕೇಂದ್ರ ಸರ್ಕಾರ ಕ್ರಮವಾಗಿ ಭಾರತೀಯ ನ್ಯಾಯ (ಎರಡನೇ) ಸಂಹಿತೆ-2021, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತೆ-2023, ಭಾರತೀಯ ಸಾಕ್ಷ್ಯ (ಎರಡನೇ)-2023 ಕಾನೂನುಗಳ ವಿಧೇಯಕವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.
ಮರುರಚಿಸಲಾದ ಹೊಸ ಮಸೂದೆಗಳನ್ನು ಕಳೆದ ವಾರ ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದರು. ಮಂಗಳವಾರದಿಂದ ಇವುಗಳ ಮೇಲೆ ಚರ್ಚೆ ಮಾಡಲಾಗಿತ್ತು. ಬುಧವಾರ ಸದನದಲ್ಲಿ ಅಮಿತ್ ಶಾ ಮಸೂದೆಗಳ ಬಗ್ಗೆ ಉತ್ತರ ನೀಡಿದ ಬಳಿಕ ಅಂಗೀಕಾರ ನೀಡಲಾಯಿತು.
“ಮೂರು ವಿಧೇಯಕಗಳನ್ನು ಸಮಗ್ರ ಸಮಾಲೋಚನೆಯ ನಂತರವೇ ರೂಪಿಸಲಾಗಿದೆ. ಅಂಗೀಕಾರಕ್ಕಾಗಿ ಸದನದ ಮುಂದೆ ತರುವ ಮುನ್ನ ಕರಡು ಶಾಸನಗಳ ಪ್ರತಿ ಅಲ್ಪವಿರಾಮ ಮತ್ತು ಪೂರ್ಣ ವಿರಾಮವನ್ನೂ ಓದಲಾಗಿದೆ. ಅಸ್ತಿತ್ವದಲ್ಲಿದ್ದ ಕಾನೂನುಗಳು ನ್ಯಾಯ ನೀಡುವ ಉದ್ದೇಶ ಹೊಂದದೇ ಶಿಕ್ಷೆ ವಿಧಿಸುವ ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದವು.
ಮರುರಚಿಸಲಾದ ಮೂರು ಹೊಸ ಮಸೂದೆಗಳು ಭಾರತೀಯ ಚಿಂತನೆಯ ಆಧಾರದ ಮೇಲೆ ನ್ಯಾಯ ವ್ಯವಸ್ಥೆ ಸ್ಥಾಪಿಸಲು ಸಹಕಾರಿಯಾಗಿವೆ. ಜನರನ್ನು ಮಾಹತುಶಾಹಿ ಮನಸ್ಥಿತಿ ಮತ್ತು ಅದರ ಸಂಕೇತಗಳಿಂದ ಮುಕ್ತಗೊಳಿಸುತ್ತವೆ ಎಂದು ಅಮಿತ್​ ಶಾ ಪ್ರತಿಪಾದಿಸಿದರು.
ಹಳೆಯ ಕಾನೂನುಗಳು ಸೆಕ್ಷನ್ 375-376ರ ಅಡಿಯಲ್ಲಿ ಅತ್ಯಾಚಾರ ಪ್ರಕರಣಗಳನ್ನು ಪಟ್ಟಿ ಮಾಡಿದ್ದವು. ಹೊಸ ಮಸೂದೆಯು ಸೆಕ್ಷನ್ 63ರ ಅಡಿಯಲ್ಲಿ ಅತ್ಯಾಚಾರ ಪ್ರಕರಣಗಳ ಪಟ್ಟಿ ಮಾಡಿದೆ. ಕೊಲೆ ಪ್ರಕರಣವು ಸೆಕ್ಷನ್ 302ರ ಬದಲಿಗೆ ಸೆಕ್ಷನ್ 101, ಅಪಹರಣ ಪ್ರಕರಣವು ಸೆಕ್ಷನ್ 359 ಬದಲು ಈಗ ಸೆಕ್ಷನ್ 136ರಡಿ ಸೇರಿಸಲಾಗಿದೆ. ಈ ಮಸೂದೆಗಳು ಗುಂಪು ಹತ್ಯೆಗೆ ಮರಣದಂಡನೆ ಶಿಕ್ಷೆ ಒದಗಿಸುತ್ತವೆ ಎಂದು ವಿವರಿಸಿದರು.
ಪ್ರಮುಖ ಬದಲಾವಣೆಗಳು ಯಾವವು?1. ದೇಶದ್ರೋಹ ಕಾನೂನು ಬದಲುಬ್ರಿಟಿಷರ ಕಾಲದಲ್ಲಿ ಜಾರಿಗೆ ತಂದ ದೇಶದ್ರೋಹದ ಕಾನೂನಿನಲ್ಲಿ ಬಂಧಿತರಾದವರಿಗೆ ಮೂರು ವರ್ಷದಿಂದ ಜೀವಾವಧಿ ಶಿಕ್ಷೆ ನೀಡಬಹುದಾಗಿದ್ದು, ಈ ಕಾನೂನು ರದ್ದುಗೊಳಿಸಲಾಗುತ್ತದೆ. ಇದರ ಬದಲಾಗಿ ಹೊಸ ನಿಯಮಗಳು ಜಾರಿಗೆ ಬರಲಿವೆ.
2.ರೇಪಿಸ್ಟ್‌ಗಳಿಗೆ 20 ವರ್ಷ ಜೈಲುದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಶಿಕ್ಷೆ ವಿಧಿಸುವ ನೂತನ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ಹೊಸ ಕಾನೂನುಗಳ ಅಡಿಯಲ್ಲಿ ಅತ್ಯಾಚಾರಿಗಳಿಗೆ ಗರಿಷ್ಠ 20 ವರ್ಷ ಅಥವಾ ಅವರು ಜೀವಿತಾವಧಿವರೆಗೆ ಜೈಲಿನಲ್ಲಿ ಕಾಲ ಕಳೆಯುವ ರೀತಿ ಶಿಕ್ಷೆ ವಿಧಿಸಲಾಗುತ್ತದೆ. ಹಾಗೆಯೇ, ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು ಶಿಕ್ಷೆ ವಿಧಿಸುವ, ಅತ್ಯಾಚಾರ ಸಂತ್ರಸ್ತೆಯರ ಮಾಹಿತಿ ಬಹಿರಂಗಪಡಿಸಿದವರಿಗೂ ಶಿಕ್ಷೆ ವಿಧಿಸುವ ಕಾನೂನು ಇರಲಿದೆ.3. ಗುಂಪು ಹತ್ಯೆ ಅಪರಾಧಿಗಳಿಗೆ ಜೀವಾವಧಿಗುಂಪು ಹತ್ಯೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಮುಂದಾಗಿದೆ. “ಗುಂಪು ಹತ್ಯೆಯಲ್ಲಿ ಭಾಗಿಯಾದವರಿಗೆ ಕನಿಷ್ಠ ಏಳು ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಹಾಗೆಯೇ, ಹೆಚ್ಚಿನ ಮೊತ್ತದ ದಂಡವನ್ನೂ ವಿಧಿಸಲಾಗುತ್ತದೆ.
ಸಂಸದರನ್ನು ಅಮಾನತು ಮಾಡುತ್ತಿರುವ ಬಗ್ಗೆ ಏಕೆ ಚರ್ಚೆಯಾಗುತ್ತಿಲ್ಲ: ರಾಹುಲ್ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − fourteen =
Remember me
