ಗಾಂಧಿನಗರ:ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಅಮಿತ್ ಷಾ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಶುಕ್ರವಾರ ಗಾಂಧಿನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ: ಮಣಿಪುರದಲ್ಲಿ ಗುಂಡಿನ ದಾಳಿ! ದಿಕ್ಕಾಪಾಲಾದ ಮತದಾರರು
ಅಮಿತ್ ಷಾ ಅವರು ಗುಜರಾತ್​​ನ ಗಾಂಧಿನಗರ ಲೋಕಸಭೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ತನ್ನ ಪಕ್ಷದ ಕಾರ್ಯದರ್ಶಿ ಸೋನಾಲ್ ಪಟೇಲ್ ಅವರನ್ನು ಗಾಂಧೀನಗರದಿಂದ ಅಖಾಡಕ್ಕಿಳಿಸಿದೆ.
#WATCH| Gujarat: Union Home Minister Amit Shah files his nomination from the Gandhinagar Lok Sabha seat for the upcoming#LokSabhaElections2024
Gujarat CM Bhupendra Patel is also present.
Congress has fielded its party secretary Sonal Patel from Gandhinagar.pic.twitter.com/M3Noc9otu3
— ANI (@ANI)April 19, 2024

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅಮಿತ್ ಷಾ ಅವರು, ಈ ಹಿಂದೆ ಎಲ್‌ಕೆ ಅಡ್ವಾಣಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರು ಪ್ರತಿನಿಧಿಸಿದ್ದ ಮತ್ತು ಪ್ರಧಾನಿ ನರೇಂದ್ರ ಮೋದಿ ಮತದಾರರಾಗಿರುವ ಗಾಂಧಿನಗರ ಕ್ಷೇತ್ರದಿಮದ ಸ್ಪರ್ಧಿಸುತ್ತಿರುವುದು ನನಗೆ ಹೆಮ್ಮೆ ತಂದಿದೆ ಎಂದಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಅವರು 5,57,014 ಮತಗಳ ಅಂತರದಿಂದ ಮೊದಲ ಬಾರಿಗೆ ಸ್ಥಾನವನ್ನು ಗೆದ್ದಿದ್ದರು. ಅವರು 3,37,610 ಮತಗಳನ್ನು (26.26%) ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ ಸಿಜೆ ಚಾವ್ಡಾ ಅವರನ್ನು ಸೋಲಿಸಿದ್ದರು.ಗುಜರಾತ್‌ನಲ್ಲಿ ಮೇ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
ಗುಜರಾತ್‌ನಲ್ಲಿ ಮೇ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಅಮಿತ್ ಷಾ ಅವರು ನಾಮಪತ್ರ ಸಲ್ಲಿಕೆ ವೇಳೆ ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಾಂಘವಿ ಜೊತೆಗಿದ್ದರು.
ಆಂಧ್ರ ಸಿಎಂ ಜಗನ್ ಚಿಕ್ಕಪ್ಪ ಹತ್ಯೆ ಪ್ರಕರಣ: ಹೇಳಿಕೆ ನೀಡದಂತೆ ನ್ಯಾಯಾಲಯ​ ನಿರ್ಬಂಧ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
