ನವದೆಹಲಿ:ಲೋಕಸಭೆ ಸದಸ್ಯರಾಗಿ ಅಸನ್ಸೋಲ್ ಕ್ಷೇತ್ರದ ಸಂಸದ ಬಾಲಿವುಡ್ ನಟ ಮತ್ತು ತೃಣಮೂಲ ಕಾಂಗ್ರೆಸ್​ನ ಸಂಸದ ಶತ್ರುಘ್ನ ಸಿನ್ಹಾ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಇದನ್ನೂ ಓದಿ:ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್ ಮಿಶ್ರಾಗೆ ಸುಪ್ರೀಂನಿಂದ ಜಾಮೀನು
ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶತ್ರುಘ್ನ ಸಿನ್ಹಾ ಗೆಲುವು ಸಾಧಿಸಿದ್ದರು. ಜೂನ್​ನಲ್ಲಿ ನಡೆದ ಅಧಿವೇಶನದಲ್ಲಿ ಶತ್ರುಘ್ನ ಸಿನ್ಹಾ ಅವರು ಕಾರಣಾಂತರಗಳಿಂದ ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರಿಸಲು ಸಾಧ್ಯವಾಗಲಿಲ್ಲ. ಇದರಿಂದ ಇಂದು ಸಂಸತ್ತಿನಲ್ಲಿ ದೇವರ ಹೆಸರಿನಲ್ಲಿ ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಲೋಕಸಭೆಯ 543 ಸದಸ್ಯರ ಬಲ ಹೊಂದಿದ್ದು, 542 ಸದಸ್ಯರು ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಸದ ಶತ್ರುಘ್ನ ಸಿನ್ಹಾ ಅವರು ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ 59,564 ಮತಗಳಿಂದ ಗೆದ್ದಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಸೋಮವಾರ) ಸಂಸತ್​ನಲ್ಲಿ 2023-24ರ ಸಾಲಿನ ಆರ್ಥಿಕ ಸಮೀಕ್ಷೆ ವರದಿ ಪ್ರಸ್ತುತಪಡಿಸಿದರು. ಮಧ್ಯಾಹ್ನ 1 ಗಂಟೆಗೆ ಲೋಕಸಭೆಯಲ್ಲಿ, ಮತ್ತು 2 ಗಂಟೆಗೆ ರಾಜ್ಯಸಭೆಯಲ್ಲಿ ಈ ವರದಿಯನ್ನು ಮಂಡನೆ ಮಾಡಿದರು.ನಾಳೆ ಮಂಗಳವಾರ (ಜುಲೈ 23) ಕೇಂದ್ರ ಬಜೆಟ್ ಮಂಡನೆ ಆಗಲಿದೆ. ಬಜೆಟ್ ಮಂಡನೆಗೆ ಒಂದು ದಿನ ಆರ್ಥಿಕ ಸಮೀಕ್ಷೆ ವರದಿಯನ್ನು ಪ್ರಸ್ತುತಪಡಿಸಲಾಗುತ್ತದೆ. ಇದು ಬಜೆಟ್​ನ ಪೂರ್ವಭಾವಿ ಆರ್ಥಿಕ ಅವಲೋಕನದ ದಾಖಲೆಯಾಗಿರುತ್ತದೆ. ದೇಶದ ಒಟ್ಟಾರೆ ಆರ್ಥಿಕ ಚಿತ್ರಣ ಹೇಗಿದೆ ಎಂಬುದನ್ನು ಈ ಸಮೀಕ್ಷೆ ಸುಳಿವು ನೀಡುತ್ತದೆ.
ದೇಶದ ಜನಪ್ರಿಯ ನಟ ಪ್ರಭಾಸ್​! ನಂತರದ ಸ್ಥಾನಗಳಲ್ಲಿ ಯಾರಿದ್ದಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ..

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:nine + six =
Remember me
