ನವದೆಹಲಿ:ಮೋದಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ (ಜೂನ್​​ 24) ಆರಂಭಗೊಂಡಿದೆ. ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಗೆ ಸಂಬಂಧಿಸಿದಂತೆ ಚರ್ಚೆಗಳು ಮತ್ತು ಒಮ್ಮತದ ರಚನೆ ಆರಂಭವಾಗಿದೆ. ಆದರೆ ಲೋಕಸಭೆಯ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಒಮ್ಮತ ಮೂಡಿಸುವ ಎಲ್ಲ ಪ್ರಯತ್ನಗಳೂ ವಿಫಲವಾಗಿವೆ. ಸ್ಪೀಕರ್ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯ ಬಗ್ಗೆ ವಿರೋಧ ಪಕ್ಷಗಳ ಭಿನ್ನಾಭಿಪ್ರಾಯದ ನಡುವೆ ಪ್ರತಿಪಕ್ಷಗಳು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಇದನ್ನು ಓದಿ:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಮತ ಚಲಾಯಿಸಿರುವುದು ಅದೊಂದೆ ಏಕೈಕ ಸಮುದಾಯ; ಸಿಎಂ ಹಿಮಂತ ಬಿಸ್ವಾ ಶರ್ಮಾ
ಪ್ರತಿಪಕ್ಷಗಳು ಕಾಂಗ್ರೆಸ್ ಸಂಸದ ಕೊಂಡಿಕುನಾಲ್​​ ಸುರೇಶ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಸಭಾಧ್ಯಕ್ಷ ಸ್ಥಾನಕ್ಕೆ ಕೆ.ಸುರೇಶ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇನ್ನು ಆಡಳಿತಾರೂಢ ಎನ್‌ಡಿಎಯಿಂದ ಓಂ ಬಿರ್ಲಾ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 72 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಲೋಕಸಭೆಯಲ್ಲಿ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಇಲ್ಲಿಯವರೆಗೆ ಪಕ್ಷ ಮತ್ತು ವಿರೋಧ ಪಕ್ಷಗಳ ಒಮ್ಮತದ ಮೇರೆಗೆ ಸ್ಪೀಕರ್ ನೇಮಕ ಮಾಡಲಾಗಿತ್ತು.
ಮುಂಜಾನೆ ರಾಜನಾಥ್ ಸಿಂಗ್ ಅವರನ್ನು ಪ್ರತಿಪಕ್ಷಗಳ ನಾಯಕರು ಭೇಟಿ ಮಾಡಿದ್ದರು. ಆದರೆ ನಾಮಪತ್ರ ಸಲ್ಲಿಕೆಗೆ ಕೆಲವೇ ನಿಮಿಷಗಳ ಮೊದಲು ರಾಜನಾಥ್​​ ಸಿಂಗ್​​ ಅವರ ಕಚೇರಿಯಿಂದ ಹೊರನಡೆದ ಪ್ರತಿಪಕ್ಷಗಳ ನಾಯಕರು ಸ್ಪೀಕರ್​ ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಗೆ ಬೆಂಬಲ ನೀಡಲು ನಿರಾಕರಿಸಿದ್ದಾರೆ.
ರಾಜ್​ನಾಥ್​ ಸಿಂಗ್​ ಅವರ ಭೇಟಿ ಬಳಿಕ ಮಾತನಾಡಿದ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್, ಸ್ಪೀಕರ್ ಹುದ್ದೆಗೆ ಒಮ್ಮತ ಮೂಡಿದರೆ ಸಂಪ್ರದಾಯದಂತೆ ಉಪಸಭಾಪತಿ ವಿಪಕ್ಷದವರೇ ಆಗಿರಬೇಕು. ಈಗ ಸ್ಪೀಕರ್ ಹುದ್ದೆ ನಾಮಪತ್ರಕ್ಕೆ ಸಹಿ ಹಾಕಲು ಸರ್ಕಾರ ಕೇಳುತ್ತಿದೆ. ಆದರೆ ಉಪಸಭಾಪತಿ ಸ್ಥಾನವನ್ನು ನಂತರ ಪರಿಗಣಿಸುವ ಬಗ್ಗೆ ಮಾತನಾಡುತ್ತಿದೆ. ಇದನ್ನು ಪ್ರತಿಪಕ್ಷಗಳು ಒಪ್ಪುವುದಿಲ್ಲ. ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ತಿಳಿಸಿದರು.
ಸಂಸದೀಯ ಪ್ರಜಾಪ್ರಭುತ್ವದಲ್ಲಿ ಲೋಕಸಭೆಯ ಸ್ಪೀಕರ್ ಹುದ್ದೆಗೆ ಪ್ರಮುಖ ಸ್ಥಾನವಿದೆ ಎಂದು ಲೋಕಸಭೆಯ ಸ್ಪೀಕರ್ ಬಗ್ಗೆ ಹೇಳಲಾಗುತ್ತದೆ. ಸಂಸತ್ತಿನ ಸದಸ್ಯರು ತಮ್ಮ ಕ್ಷೇತ್ರಗಳನ್ನು ಪ್ರತಿನಿಧಿಸುತ್ತಾರೆ. ಆದರೆ ಸ್ಪೀಕರ್ ಸದನದ ಸಂಪೂರ್ಣ ಅಧಿಕಾರವನ್ನು ಪ್ರತಿನಿಧಿಸುತ್ತಾರೆ. ಲೋಕಸಭೆಯ ಸ್ಪೀಕರ್ ಅನ್ನು ಸಂವಿಧಾನದ 93ನೇ ವಿಧಿಯ ಅಡಿಯಲ್ಲಿ ಆಯ್ಕೆ ಮಾಡಲಾಗುತ್ತದೆ.
ಲೋಕಸಭೆಯ ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್ ಅವರನ್ನು ಸಂಸದರು ತಮ್ಮಿಂದಲೇ ಆಯ್ಕೆ ಮಾಡುತ್ತಾರೆ. ಲೋಕಸಭೆಯ ಸ್ಪೀಕರ್ ಮತ್ತು ಉಪಸಭಾಪತಿಯನ್ನು ಸದನದಲ್ಲಿ ಹಾಜರಿರುವ ಮತ್ತು ಮತ ಚಲಾಯಿಸುವ ಸದಸ್ಯರ ಸರಳ ಬಹುಮತದ ಮೂಲಕ ಚುನಾಯಿಸಲಾಗುತ್ತದೆ. ಅಂದರೆ ಆ ದಿನದಂದು ಲೋಕಸಭೆಯಲ್ಲಿ ಹಾಜರಿರುವ ಅರ್ಧಕ್ಕಿಂತ ಹೆಚ್ಚು ಸಂಸದರು ಸ್ಪೀಕರ್ ಆಗಿ ಆಯ್ಕೆಯಾಗುತ್ತಾರೆ.
ಲೋಕಸಭೆಯ ಸ್ಪೀಕರ್‌ಗೆ ಯಾವುದೇ ವಿಶೇಷ ಅರ್ಹತೆ ನಿಗದಿಪಡಿಸಿಲ್ಲ. ಅವರು ಲೋಕಸಭೆಯ ಸದಸ್ಯರಾಗಿರಬೇಕು. ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಸದಸ್ಯರು ಸಂವಿಧಾನ, ದೇಶದ ಕಾನೂನುಗಳು, ಕಾರ್ಯವಿಧಾನಗಳು, ನಿಯಮಗಳು ಮತ್ತು ಸಂಸತ್ತಿನ ಸಂಪ್ರದಾಯಗಳ ಬಗ್ಗೆ ಉತ್ತಮ ತಿಳುವಳಿಕೆಯನ್ನು ಹೊಂದಿರುತ್ತಾರೆ ಎಂದು ನಿರೀಕ್ಷಿಸಲಾಗಿದೆ. (ಏಜೆನ್ಸೀಸ್​​)
ಮೋದಿ 3.0 ಸರ್ಕಾರದಲ್ಲಿ ಜೆ.ಪಿ ನಡ್ಡಾ ಹೆಗಲಿಗೆ ಮತ್ತೊಂದು ದೊಡ್ಡ ಜವಾಬ್ದಾರಿ! ಏನದು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 11 =
Remember me
