ಬೆಂಗಳೂರು:ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಕೆಲವು ಕ್ಷೇತ್ರಗಳಲಗಲಿ ಈಗಾಗಲೇ ಹೊರ ಬಿದ್ದಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಧಿಸಿದ್ದು, ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಹೆಚ್ಚಾಗಿದೆ.
ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳ 14 ಸ್ಥಾನಗಳಿಗೆ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಮತ್ತು ಉತ್ತರ ಜಿಲ್ಲೆಗಳ 14 ಜಿಲ್ಲೆಗಳಲ್ಲಿ ಎರಡನೇ ಹಂತದ ಮತದಾನ ಮೇ 7ರಂದು ನಡೆದಿದೆ. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ತಲಾ ಒಂದು ಮತ ಎಣಿಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ತುಮಕೂರಿನಲ್ಲಿ ಎರಡು ಸ್ಥಳಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.
ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರು ಕೆಲವು ಅಭ್ಯರ್ಥಿಗಳು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹಿಂದಿನ ನೋವನ್ನು ಮರೆತಿದ್ದಾರೆ. ಯಾರ್ಯರು ಈ ಪಟ್ಟಿಯಲ್ಲಿದ್ದಾರೆ ಎಂದು ನೋಡುವುದಾದರೆ…
ಡಾ ಸುಧಾಕರ್:ಬೆಂಗಳೂರು ಮಹಾನಗರ ಸಮೀಪವಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಡಾ ಸುಧಾಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ರಕ್ಷಾ ರಾಮಯ್ಯ ವಿರುದ್ಧ 1 ಲಕ್ಷ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಸುಧಾಕರ್ ಅವರು ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಆದರೆ, ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹಿಂದಿನ ನೋವನ್ನು ಮರೆತಿದ್ದಾರೆ.
ಜಗದೀಶ್‌ ಶೆಟ್ಟರ್‌:ಬೆಳಗಾವಿ ಲೋಕಸಭೆ ಚುನಾವಣೆ ಕ್ಷೇತ್ರದಲ್ಲಿ ಬಿಜೆಪಿಯ ಜಗದೀಶ್‌ ಶೆಟ್ಟರ್‌ ಅವರು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಭದ್ರಕೋಟೆಯೇ ಆಗಿರುವ ಬೆಳಗಾವಿಯಲ್ಲಿ ಈ ಬಾರಿ ಬಿಜೆಪಿಯಿಂದ ಜಗದೀಶ್‌ ಕಣಕ್ಕಿಳಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಸ್ಪರ್ಧಿಸಿದ್ದರು. ಆದರೆ, ಕ್ಷೇತ್ರದ ಮತದಾರರು ಜಗದೀಶ್‌ ಶೆಟ್ಟರ್‌ ಅವರನ್ನು 1.33 ಲಕ್ಷ ಮತಗಳಿಂದ ಗೆಲ್ಲಿಸಿದ್ದಾರೆ. ಶೆಟ್ಟರ್‌ ಗೆಲುವಿನ ಕುರಿತು ಚುನಾವಣೆ ಆಯೋಗವು ಅಧಿಕೃತ ಘೋಷಣೆ ಮಾಡುವುದೊಂದೇ ಬಾಕಿ ಉಳಿದಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿ:ಬಿಜೆಪಿಯ ಭದ್ರಕೋಟೆಯಾದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನಿರೀಕ್ಷೆಯಂತೆಯೇ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಸೋತಿದ್ದಾರೆ.
ಒಟ್ಟು 6 ಬಾರಿ ಬಿಜೆಪಿಯಿಂದ ಕಣಕ್ಕಿಳಿದು ಶಾಸಕರಾಗಿ ಆಯ್ಕೆಯಾಗುವ ಮೂಲಕ ಸುದೀರ್ಘ ಅವಧಿಗೆ ರಾಜಕೀಯದಲ್ಲಿ ಅನುಭವ ಹೊಂದಿರುವ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ. ಕೊನೆಯ ಬಾರಿಗೆ 2023ರ ವಿಧಾನಸಭಾ ಚುನಾವಣೆಯಲ್ಲಿ ಶಿರಸಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಹೀಗಾಗಿ ಈ ಬಾರಿಯ ಲೋಕಸಭಾ ಟೆಕೆಟ್‌ ನೀಡುವ ಮೂಲಕ, ಬಿಜೆಪಿ ಹೈಕಮಾಂಡ್‌ ಅವರಿಗೆ ಸಂಸದರಾಗುವ ಅವಕಾಶ ನೀಡಿದೆ. ಹಾಲಿ ಸಂಸದ ಅನಂತಕುಮಾರ್‌ ಹೆಗಡೆ ಅವರನ್ನು ಬದಿಗಿಟ್ಟು, ಈ ಬಾರಿ ಮಾಜಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು. ಉತ್ತರ ಕನ್ನಡದಿಂದ ಈ ಹಿಂದೆ ಆರು ಬಾರಿ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ಅನಂತಕುಮಾರ್ ಹೆಗಡೆ, ಕ್ಷೇತ್ರದಲ್ಲಿ 2004ರಿಂದ ಸತತ ನಾಲ್ಕನೇ ಅವಧಿಗೆ ಸಂಸದರಾಗಿದ್ದರು. ಈ ಬಾರಿ ಅನಂತಕುಮಾರ್‌ ಬದಲಿಗೆ ಕಾಗೇರಿ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು.
ವಿ.ಸೋಮಣ್ಣ:ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ನ ಮುದ್ದ ಹನುಮೇಗೌಡ ಪಕ್ಷಕ್ಕೆ ಮರಳಿದ ಎರಡೇ ತಿಂಗಳಲ್ಲಿ ಸೋಲು ಅನುಭವಿಸಿದ್ದಾರೆ. ಬೆಂಗಳೂರಿನಿಂದ ತುಮಕೂರಿಗೆ ಬಂದ ವಿ.ಸೋಮಣ್ಣ ಭಾರೀ ಅಂತರದ ಜಯಗಳಿಸಿ ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಕಹಿ ಮರೆಯುವಂತೆ ಆಗಿದೆ. ಈ ಮೂಲಕ ತುಮಕೂರು ರಾಜಕಾರಣದಲ್ಲಿ ಬದಲಾವಣೆಯ ಲೆಕ್ಕಾಚಾರ ಇದ್ದೇ ಇದೆ ಎನ್ನುವುದನ್ನು ಮತದಾರ ಸಾರಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ರಾಜಕಾರಣದಲ್ಲಿ ಮಾಜಿ ಪ್ರಧಾನಿಯನ್ನೇ ಸೋಲಿಸಿದ್ದ ಇಲ್ಲಿ ರಾಜಕಾರಣ, ಈ ಬಾರಿ ಬಿಜೆಪಿ ಜೆಡಿಎಸ್‌ ಮೈತ್ರಿಯಲ್ಲಿ ವಿ.ಸೋಮಣ್ಣ ಅವರನ್ನು ಗೆಲ್ಲಿಸಿ ಬದಲಾವಣೆಗೆ ನಾಂದಿ ಹಾಡಿದ್ದಾರೆ.
ಗೋವಿಂದ ಕಾರಜೋಳ:2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮುಧೋಳ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದ ಗೋವಿಂದ್ ಕಾರಜೋಳ ಚಿತ್ರದುರ್ಗಕ್ಕೆ ವಲಸೆ ಹೋಗಿ ಗೆಲುವುಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್ ಚಂದ್ರಪ್ಪ ವಿರುದ್ಧ 47,958 ಮತಗಳ ಅಂತರದಿಂದ ಗೆಲವು ಕಂಡಿದ್ದಾರೆ.
ಶ್ರೇಯಸ್​ ಎಂ. ಪಟೇಲ್:ಹಾಸನ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಶ್ರೇಯಸ್​.ಎಂ. ಪಟೇಲ್​ 2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿ ಜೆಡಿಎಸ್​ನ ಎಚ್​.ಡಿ. ರೇವಣ್ಣ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅವರ ಪುತ್ರ ಪ್ರಜ್ವಲ್​ ರೇವಣ್ಣ ವಿರುದ್ಧ ಸ್ಪರ್ಧಿಸಿ ಗೆಲ್ಲುವ ಮೂಲಕ ವಿಧಾನಸಭೆ ಚುನಾವಣೆಯ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:13 + eleven =
Remember me
