ನವದೆಹಲಿ:400ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಘೋಷಣೆಯೊಂದಿಗೆ ಲೋಕಸಭೆ ಚುನಾವಣೆಗೆ ಧುಮುಕಿದ ಬಿಜೆಪಿ ನೇತೃತ್ವದ ಎನ್ ಡಿಎ ಬಹುಮತಕ್ಕೆ ಸೀಮಿತವಾದಂತಿದೆ. ಚುನಾವಣಾ ಆಯೋಗವು ಮಧ್ಯಾಹ್ನ 12 ಗಂಟೆಯವರೆಗೆ ಬಿಡುಗಡೆ ಮಾಡಿರುವ ಟ್ರೆಂಡ್‌ಗಳ ಪ್ರಕಾರ ಎನ್‌ಡಿಎ ಮೈತ್ರಿಕೂಟ 298 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ:ಆಂಧ್ರ ವಿಧಾನಸಭಾ ಚುನಾವಣೆ: ತೆಲುಗುದೇಶಂಗೆ 1994ಕ್ಕೂ ಮೀರಿದ ಯಶಸ್ಸು.. ವೈಸಿಪಿಗೆ ಪ್ರತಿಪಕ್ಷ ಸ್ಥಾನವೂ ಅನುಮಾನ!
ಚುನಾವಣೋತ್ತರ ಸಮೀಕ್ಷೆಗಳನ್ನು ತಲೆಕೆಳಗೆ ಮಾಡುವಂತೆ ‘ಇಂಡಿಯಾ’ ಮೈತ್ರಕೂಟವು 2225 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ‘ಇಂಡಿಯಾ’ ಮೈತ್ರಿಕೂಟದ ಪಾಲುದಾರ ಪಕ್ಷಗಳಾದ ಸಮಾಜವಾದಿ ಪಕ್ಷ 33 ಸ್ಥಾನಗಳಲ್ಲಿ ಮತ್ತು ತೃಣಮೂಲ ಕಾಂಗ್ರೆಸ್ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುನ್ನಡೆ ಸಾಧಿಸಿದ್ದಾರೆ. ರಾಯಬರೇಲಿ ಮತ್ತು ವಯನಾಡಿನಲ್ಲಿ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದಿಂದ 303 ಸ್ಥಾನಗಳನ್ನು ಗೆದ್ದಿದ್ದರೆ, ಎನ್‌ಡಿಎ 353 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದಿದ್ದರಿಂದ ಯುಪಿಎ 93 ಸ್ಥಾನಗಳಿಗೆ ಸೀಮಿತವಾಗಿತ್ತು.
ವಯನಾಡ್​, ರಾಯ್ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
