ಲಂಡನ್​:ಬೋರಿಸ್ ಜಾನ್ಸನ್​​​ ಅವರ ರಾಜೀನಾಮೆಯಿಂದ ತೆರವಾಗಿರುವ ಯುನೈಟೆಡ್​​ ಕಿಂಗ್​ಡಮ್​ ಪ್ರಧಾನಿ ಹುದ್ದೆಗೆ ಈಗಾಗಲೇ ಮತದಾನ ಆರಂಭಗೊಂಡಿದೆ. ಮೊದಲ ಸುತ್ತಿನಲ್ಲಿ ಮುನ್ನಡೆ ಪಡೆದುಕೊಂಡಿದ್ದ ರಿಷಿ ಸುನಕ್​ ಇದೀಗ ಎರಡನೇ ಸುತ್ತಿನ ಮತದಾನದಲ್ಲೂ ಹೆಚ್ಚು ಮತ ಪಡೆದುಕೊಂಡಿದ್ದಾರೆ.
ಗುರುವಾರ ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಬ್ರಿಟನ್​ ಮಾಜಿ ಹಣಕಾಸು ಸಚಿವ ರಿಷಿ ಸುನಕ್​​ 101 ಮತ ಪಡೆದುಕೊಳ್ಳುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ಇದರ ಜತೆಗೆ ಪ್ರಧಾನಿ ರೇಸ್​​ ನಿಂದ ಓರ್ವ ಅಭ್ಯರ್ಥಿ ಹೊರಬಿದ್ದಿದ್ದಾರೆ.
ಎರಡನೇ ಸುತ್ತಿನಲ್ಲಿ ಪೆನ್ನಿ ಮೊರ್ಡಾಂಟ್​​ 83 ಮತ ಹಾಗೂ ವಿದೇಶಾಂಗ ಕಾರ್ಯದರ್ಶಿ ಲಿಜ್​ ಟ್ರಸ್​ 64 ಮತ ಪಡೆದುಕೊಂಡಿದ್ದಾರೆ. ಅಟಾರ್ನಿ ಜನರಲ್​​ ಸುಯೆಲ್ಲಾ 27 ಮತ ಪಡೆದು ರೇಸ್​ನಿಂದ ಹೊರಬಿದ್ದಿದ್ದಾರೆ.
ನಿನ್ನೆ ನಡೆದ ಮೊದಲ ಸುತ್ತಿನ ಮತದಾನದಲ್ಲಿ ರಿಷಿ ಸುನಕ್​ 88 ಮತ ಪಡೆದುಕೊಂಡು ಮುನ್ನಡೆ ಸಾಧಿಸಿದ್ದರು. ಇದೀಗ ಎರಡನೇ ಹಂತದಲ್ಲೂ ಅವರು ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಪ್ರಧಾನಿ ರೇಸ್​ನಲ್ಲಿ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ.
ಬ್ರಿಟನ್​ ಪ್ರಧಾನಿ ರೇಸ್​ನಲ್ಲಿ ರಿಷಿ ಸುನಕ್ ಮುನ್ನಡೆ: ಮೊದಲ ಸುತ್ತಿನಲ್ಲಿ ಹೆಚ್ಚು ಮತ ಪಡೆದ ಇನ್ಫಿ ಮೂರ್ತಿ ಅಳಿಯ
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:9 − 2 =
Remember me
