ವಯನಾಡು:ದೇವರ ನಾಡು ಎಂದೇ ಕರೆಯಲ್ಪಡುವ ಕೇರಳದ ವಯನಾಡಿನಲ್ಲಿ ಮಂಗಳವಾರ (ಜುಲೈ 30) ಭಾರಿ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಏರತ್ತಲೇ ಇದೆ. ಇದೀಗ ಸಾವಿಗೀಡಾದವರ ಸಂಖ್ಯೆ 308ಕ್ಕೆ ಏರಿಕೆಯಾಗಿದ್ದು, ಮಣ್ಣಿನಡಿ ಹಾಗೂ ಅವಶೇಷಗಳಡಿ ಸಿಲುಕಿರುವ ಮೃತದೇಹ ಹೊರತೆಗೆಯುವುದು ಹರಸಾಹಸವಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆಯನ್ನು ಅರ್ಧಕ್ಕೆ ನಿಲ್ಲಿಸದೆ ಮುಂದುವರೆಸಿರುವ ಭಾರತೀಯ ಸೇನೆ ಬದುಕುಳಿದಿರುವವರ ಪತ್ತೆಗಾಗಿ ನಿರಂತರವಾಗಿ ಶ್ರಮಿಸುತ್ತಿದೆ.
ಇದನ್ನೂ ಓದಿ:ದುನಿಯಾ ವಿಜಯ್ ಸಕ್ಸಸ್​ಗೂ ಸಿದ್ಧಗಂಗಾ ಮಠಕ್ಕೂ ಏನಿದು ಸಂಬಂಧ!
ಭಾರತೀಯ ಸೇನೆ, ಎನ್‌ಡಿಆರ್‌ಎಫ್, ಕೋಸ್ಟ್ ಗಾರ್ಡ್ ಮತ್ತು ಭಾರತೀಯ ನೌಕಾಪಡೆಯನ್ನು ಒಳಗೊಂಡ ಜಂಟಿ ತಂಡವು ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ಶೋಧ ಕಾರ್ಯವನ್ನು ಕೈಗೊಂಡಿದೆ. ಪ್ರತಿ ರಕ್ಷಣಾ ತಂಡವೂ ಮೂವರು ಸ್ಥಳೀಯರು ಹಾಗೂ ಒಬ್ಬರು ಅರಣ್ಯ ಇಲಾಖೆ ನೌಕರನನ್ನೂ ತಂಡದಲ್ಲಿ ಒಳಗೊಂಡಿದೆ. ಸದ್ಯ ಇದೆಲ್ಲದರ ನಡುವೆ ಭೂದುರಂತದಲ್ಲಿ ಬದುಕುಳಿದ 1000ಕ್ಕೂ ಅಧಿಕ ಸಂತ್ರಸ್ತರನ್ನು ಇದೀಗ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದ್ದು, ಅಗತ್ಯ ಚಿಕಿತ್ಸೆ ಕೊಡಿಸಲಾಗಿದೆ.
ಸರ್ಕಾರ ಮತ್ತು ಸ್ವಯಂಸೇವಕರು ವಯನಾಡು ಭೂಕುಸಿತದಿಂದ ತಮ್ಮವರನ್ನು ಕಳೆದುಕೊಂಡವರಿಗೆ ಹೊಸ ಜೀವನವನ್ನು ಪ್ರಾರಂಭಿಸಲು ಬೇಕಾದ ಸಹಾಯವನ್ನು ಮಾಡಲು ಮುಂದಾಗಿದ್ದು, ಸಂತ್ರಸ್ತರಿಗೆ ಆಹಾರ ಪೂರೈಕೆಯ ಅಗತ್ಯವು ಹೆಚ್ಚಾಗಿದೆ. ಈ ಪರಿಸ್ಥಿತಿಯಲ್ಲಿ ತಂತ್ರಜ್ಞಾನ ದೊಡ್ಡ ಪಾತ್ರ ವಹಿಸಿದ್ದು, ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ಹಾಗೂ ತಿರುವನಂತಪುರಂನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಇಂಟರ್ ಡಿಸಿಪ್ಲಿನರಿ ಸೈನ್ಸ್ ಅಂಡ್ ಟೆಕ್ನಾಲಜಿ ಬದುಕುಳಿದವರಿಗೆ ಆಹಾರ ಪದಾರ್ಥಗಳನ್ನು ತಯಾರಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ.
ಇದನ್ನೂ ಓದಿ:ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ
NIIST ತಂಡವು ತಂತ್ರಜ್ಞಾನವನ್ನು ಬಳಸಿಕೊಂಡು ಸಂತ್ರಸ್ತರಿಗೆ ದೀರ್ಘಾವಧಿಯ ಆಹಾರವನ್ನು ಪೂರೈಕೆ ಮಾಡಲು ಎದುರುನೋಡುತ್ತಿದ್ದು, ಪ್ರತಿ ಆಹಾರ ಪದಾರ್ಥದ 1000 ಪ್ಯಾಕೆಟ್‌ಗಳನ್ನು ತಯಾರಿಸಲು 70ಕ್ಕೂ ಹೆಚ್ಚು ಜನರು ಕೈಜೋಡಿಸಿದ್ದಾರೆ,(ಏಜೆನ್ಸೀಸ್).
ಇದನ್ನು ಇಲ್ಲಿಗೆ ಬಿಟ್ಟುಬಿಡಿ, ನಾವಿನ್ನು… ತಮ್ಮ ತಂಡಕ್ಕೆ ರೋಹಿತ್ ಶರ್ಮ ಕಿವಿಮಾತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + four =
Remember me
