ತೆಲಂಗಾಣ:ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಆಟೋರಿಕ್ಷಾ ಮತ್ತು ಮೋಟಾರ್‌ ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದುರ್ಘಟನೆ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯಲ್ಲಿ ಶುಕ್ರವಾರ (ಜ.5) ತಡರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಈ ವಾರ ಮನೆಯಿಂದ ಬಿಗ್​ ಬಾಸ್​ ಮನೆಯಿಂದ ಹೊರಗೆ ಹೋಗೋದ್ಯಾರು?
ಅಪಘಾತ ಸಂಭವಿಸಿದ ಬೆನ್ನಲ್ಲೇ ಸ್ಥಳೀಯರಿಂದ ತೀವ್ರ ಪ್ರತಿಭಟನೆಗಳು ಭುಗಿಲೆದ್ದಿದ್ದು, ಲಾರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಜನರ ಹಾವಳಿಯಿಂದ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಘಟನೆಗೂ ಮೊದಲು ಡಿಸೆಂಬರ್ 25 ರಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಮಂಜು ಕವಿದ ವಾತಾವರಣದಿಂದಾಗಿ ರಾಷ್ಟ್ರೀಯ ಹೆದ್ದಾರಿ 186ರಲ್ಲಿ ಸಂಭವಿಸಿದ ಎರಡು ರಸ್ತೆ ಅಪಘಾತಗಳಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದರು,(ಏಜೆನ್ಸೀಸ್).
ರೈಲು ವಿಳಂಬದಿಂದ 20,000 ಟಿಕೆಟ್‌ ರದ್ದು! ರೈಲ್ವೆ ಇಲಾಖೆಗೆ ಉಂಟಾದ ನಷ್ಟ ಎಷ್ಟು ಕೋಟಿ ರೂ.? ಇಲ್ಲಿದೆ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
