ನವದೆಹಲಿ:ಸದ್ಯ ಅಸ್ಥಿತ್ವದಲ್ಲಿರುವ ಕಾನೂನಿನ ಅಡಿಯಲ್ಲಿ “ಲವ್​ ಜಿಹಾದ್​” ಎಂಬ ಪದವನ್ನು ಎಲ್ಲೂ ವ್ಯಾಖ್ಯಾನಿಸಿಲ್ಲ ಹಾಗೂ ಕೇಂದ್ರೀಯ ಏಜೆನ್ಸಿಗಳಿಂದ ಈ ಸಂಬಂಧ ಈವರೆಗೂ ಯಾವುದೇ ವರದಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ತಿಳಿಸಿದೆ.
ಹಿಂದು ಮತ್ತು ಮುಸ್ಲಿಂ ನಡುವಿನ ಸಂಬಂಧವನ್ನು ಉಲ್ಲೇಖಿಸಿ, ಬಲವಂತವಾಗಿ ಮಹಿಳೆಯರನ್ನು ಮತಾಂತರ ಮಾಡಲಾಗುತ್ತದೆ ಎಂಬುದನ್ನು “ಲವ್​ ಜಿಹಾದ್​” ಎಂಬ ಪದದಿಂದ ಬಲಪಂಥೀಯರು ಸಾಕಷ್ಟು ಬಾರಿ ಇದನ್ನು ಪ್ರಯೋಗ ಮಾಡುತ್ತಿರುತ್ತಾರೆ.
ಈ ಬಗ್ಗೆ ಮಾತನಾಡಿರುವ ಕೇಂದ್ರ ಗೃಹಸಚಿವಾಲಯದ ರಾಜ್ಯ ಸಚಿವ ಜಿ. ಕಿಶನ್​ ರೆಡ್ಡಿ, ಸಂವಿಧಾನದ ಆರ್ಟಿಕಲ್​ 25 ಅನ್ನು ಉಲ್ಲೇಖಿಸಿ, ಧಾರ್ಮಿಕ ವಿಚಾರಧಾರೆಗಳನ್ನು ಬಹಿರಂಗವಾಗಿ ಒಪ್ಪಿಕೊಳ್ಳುವುದು, ಆಚರಿಸುವುದು ಮತ್ತು ಪ್ರಸಾರ ಮಾಡುವ ಸ್ವಾತಂತ್ರ್ಯವನ್ನು ಇದರ ಅಡಿಯಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು.
ಕಾನೂನು ಮಟ್ಟಿಗೆ ಲವ್​ ಜಿಹಾದ್​ ಪದವನ್ನು ವ್ಯಾಖ್ಯಾನಿಸಿಲ್ಲ. ಅಂತಹ ಯಾವುದೇ ಪ್ರಕರಣಗಳು ಈವರೆಗೂ ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ವರದಿಯಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಕೃಷ್ಣನ್​ ರೆಡ್ಡಿ ಉತ್ತರಿಸಿದರು. ಆದಾಗ್ಯೂ ಪರಸ್ಪರ ನಂಬಿಕೆ ಮೇಲೆ ನಡೆದಿರುವ ಎರಡು ಮದುವೆ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳ ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು.
ಯಾವುದೇ ಕೇಂದ್ರೀಯ ಸಂಸ್ಥೆಯು ಕೇರಳದಲ್ಲಿ ಕಳೆದ ಎರಡು ವರ್ಷದಲ್ಲಿ ನಡೆದಿರುವ ಲವ್​ ಜಿಹಾದ್​ ಪ್ರಕರಣಗಳನ್ನು ವರದಿ ಮಾಡಿವೆಯೇ ಎಂದು ಕೇರಳದ ಕಾಂಗ್ರೆಸ್​ ನಾಯಕ ಬೆನ್ನೆ ಬೆಹನಾನ್​ ಕೇಳಿದ್ದ ಪ್ರಶ್ನೆಗೆ ಗೃಹ ಸಚಿವಾಲಯ ಇಂದು ಸಂಸತ್ತಿನಲ್ಲಿ ಉತ್ತರ ನೀಡಿತು.(ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + fourteen =
Remember me
