ನವದೆಹಲಿ:ಇನ್ಸ್​ಟಾಗ್ರಾಂನಲ್ಲಿ ಶುರುವಾದ ತ್ರಿಕೋನ ಪ್ರೇಮಕಥೆ ಒಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಪಹರ್‌ಗಂಜ್‌ನಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಮಹಿರ್​ (20) ಎಂದು ಗುರುತಿಸಲಾಗಿದ್ದು, ಆರೋಪಿಗಳಾದ ಅರ್ಮಾನ್‌, ಫೈಸಲ್ ಮತ್ತು ಸಮೀರ್​ ತಲೆಮಾರಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ಖಾನ್​ ಎಂಬಾತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈತ ಮಾಹಿರ್​ಗೆ 50ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಲೆ ಮಾಡಿದ್ದ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ದೆಹಲಿಯ ಪಹರ್‌ಗಂಜ್‌ನಲ್ಲಿರುವ ಫ್ಲೆಕ್ಸ್ ಪ್ರಿಂಟಿಂಗ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ 20 ವರ್ಷದ ಯುವತಿಯೊಂದಿಗೆ ಇನ್​ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ್ದರು. ಇಬ್ಬರ ನಡುವಿನ ಸ್ನೇಹವು ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಅರ್ಮಾನ್‌ಗೆ ಸಿಟ್ಟು ತರಿಸಿದೆ.
ಇದನ್ನೂ ಓದಿ:ಮನಮೋಹನ್ ಸಿಂಗ್ ಸಂವೇದನಾಶೀಲ ಪ್ರಧಾನಿಯಾಗಿದ್ದರು, ಆದರೆ ಈಗ: ಶರದ್​ ಪವಾರ್​
ಒಮ್ಮೆ ವಿಡಿಯೋ ಕರೆಯಲ್ಲಿ ಇಬ್ಬರನ್ನು ಕಂಡು ಕೋಪಗೊಂಡ ಅರ್ಮಾನ್​, ಮಹಿಳೆಯ ಫೋನ್ ಕಿತ್ತುಕೊಂಡು, ಮಾಹಿರ್​ನನ್ನು ಭೇಟಿಯಾಗದಂತೆ ತಾಕೀತು ಮಾಡಿದ್ದ. ಬಳಿಕ ಇದೇ ವಿಚಾರವಾಗಿ ಗಲಾಟೆ ನಡೆದಿದ್ದು, ಆರೋಪಿ ಅರ್ಮಾನ್​ ತನ್ನ ಸ್ನೇಹಿತರ ಜತೆಗೂಡಿ ಮಹಿರ್​ನನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ರಸ್ತೆ ಬದಿ ಶವವನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್​​​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 − eight =
Remember me
