ತಿರುಪತಿ:ನಿಜವಾದ ಪ್ರೇಮಿಗಳು ಆತ್ಮಹತ್ಯೆಗೂ ಹೆದರುವುದಿಲ್ಲ. ಇಂತಹುದೇ ಘಟನೆಯೊಂದು ವಿಶ್ವವಿಖ್ಯಾತ ಧಾರ್ಮಿಕ ಯಾತ್ರಾಸ್ಥಳ ತಿರುಪತಿ-ತಿರುಮಲದ ಪಾದಚಾರಿ ಮಾರ್ಗ(ಮೆಟ್ಟಿಲುಗಳು)ದಲ್ಲಿ ನಡೆದಿದೆ. ಪ್ರೇಮ ಜೋಡಿ ತಿರುಮಲದ ಶ್ರೀವಾರಿ ಮೆಟ್ಟಿಲ ಮೇಲೆ ಆತ್ಮಹತ್ಯೆಗೆ ಯತ್ನಿಸಿ ಸಂಚಲನ ಮೂಡಿಸಿದೆ.
ಇದನ್ನೂ ಓದಿ:ನಾಗಾರ್ಜುನ ಎನ್ ಕನ್ವೆನ್ಷನ್ ಹಾಲ್​ನೆಲಸಮಕ್ಕೆ ಹೈಕೋರ್ಟ್​ ತಡೆಯಾಜ್ಞೆ
ವಿವಾಹಿತ ಮಹಿಳೆ ಮತ್ತು ಯುವಕ ಸೇರಿ ತಿರುಮಲದ ಶ್ರೀವಾರಿ ಮೆಟ್ಟಿಲುಗಳ ಮೇಲೆ ಶುಕ್ರವಾರ ಬೆಳಗ್ಗೆ ಕ್ರಿಮಿನಾಶಕ ಸೇವಿಸಿದ್ದಾರೆ . 450ನೇ ಮೆಟ್ಟಿಲು ಹತ್ತಿರ ಇವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದೇ ವೇಳೆ ಆ ಮಾರ್ಗವಾಗಿ ಹೋಗುತ್ತಿದ್ದ ಭಕ್ತರು ಇದನ್ನು ಗಮನಿಸಿ ಕೂಡಲೇ ಟಿಟಿಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಪಂದಿಸಿದ ಟಿಟಿಡಿ ಸಿಬ್ಬಂದಿ ಇಬ್ಬರನ್ನೂ ಕೆಳಗಿಳಿಸಿದ್ದಾರೆ. ಬಳಿಕ ಸಿದ್ಧವಾಗಿದ್ದ ಆಂಬುಲೆನ್ಸ್‌ನಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ಈ ಜೋಡಿ ಚಿತ್ತೂರು ಜಿಲ್ಲೆಯ ಕೊಂಗಾರೆಡ್ಡಿಪಲ್ಲೆಗೆ ಸೇರಿದವರು ಎಂದು ಪೊಲೀಸರು ಗುರುತಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ 30 ವರ್ಷ ವಯಸ್ಸು. ಆಕೆ ಅದೇ ಗ್ರಾಮದ ಸತೀಶ್ ಎಂಬ 19 ವರ್ಷದ ಯುವಕನನ್ನು ಪ್ರೀತಿಸುತ್ತಿದ್ದಳು. ಇಬ್ಬರೂ ಓಡಿಹೋಗಲು ನಿರ್ಧರಿಸಿದ್ದರು. ಮೂರು ದಿನಗಳ ಹಿಂದೆ ಪತಿ ಮತ್ತು ಮಕ್ಕಳನ್ನು ಬಿಟ್ಟು ಮಹಿಳೆ ಮತ್ತು ಯುವಕ ಓಡಿ ಹೋಗಿದ್ದರು. ಈ ಅವಧಿಯಲ್ಲಿ ಅವರು ಅನೇಕ ಸ್ಥಳಗಳಿಗೆ ಭೇಟಿ ನೀಡಿ ಅಂತಿಮವಾಗಿ ತಿಮ್ಮಪ್ಪನ ಸನ್ನಿಧಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಪ್ರಸ್ತುತ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಕೋಲ್ಕತ್ತಾ ಕೊಲೆ ಆರೋಪಿಗೆ ಪಾಲಿಗ್ರಾಫ್ ಪರೀಕ್ಷೆ..ಇದರಲ್ಲಿ ಸುಳ್ಳು ಪತ್ತೆ ಹೇಗೆ ಮಾಡ್ತಾರೆ ? ಡೀಟೇಲ್ಸ್​ ಇಲ್ಲಿದೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
