ಹೈದರಾಬಾದ್:ತೆಲಂಗಾಣದಲ್ಲಿ ಬಿಸಿಗಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಳ ಮಾಡಿ ಬುಧವಾರ ಅಧಿಸೂಚನೆ ಹೊರಡಿಸಿದೆ.
ಇದನ್ನೂ ಓದಿ:ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಡೀಪ್‌ಫೇಕ್ ವಿಡಿಯೋ ಪ್ರಕರಣ; ಓರ್ವ ಅರೆಸ್ಟ್
ಹೀಗಿರುವ ಮತದಾನದ ಅವಧಿ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯನ್ನು ವಿಸ್ತರಿಸಲಾಗಿದೆ. ಪರಿಷ್ಕೃತ ಅವಧಿ ಅನ್ವಯ ಬೆಳಗ್ಗೆ 7 ರಿಂದ ಸಂಜೆ ಸಂಜೆ 6 ರವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ತೆಲಂಗಾಣದ 17 ಲೋಕಸಭಾ ಕ್ಷೇತ್ರಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದೆ.
17 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ 106 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚಿಸಿ ಬುಧವಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.  ಆದರೆ ಇದರ ಹಿಂದಿನ ಮಾಹಿತಿ ಪ್ರಕಾರ  ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯುವುದಾಗಿ ತಿಳಿಸಲಾಗಿತ್ತು. ಆದರೆ ಈಗ ಮತದಾನವು ಸಂಜೆ 5 ಗಂಟೆಗೆ ಮುಕ್ತಾಯಗೊಳ್ಳುವ ಬದಲು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ನಡೆಯಲಿದೆ.
ಕರೀಂನಗರ, ನಿಜಾಮಾಬಾದ್, ಜಹೀರಾಬಾದ್, ಮೇದಕ್, ಮಲ್ಕಾಜ್‌ಗಿರಿ, ಸಿಕಂದರಾಬಾದ್, ಹೈದರಾಬಾದ್, ಚೆವೆಲ್ಲಾ, ಮಹಬೂಬ್‌ನಗರ, ನಾಗರಕರ್ನೂಲ್ (ಎಸ್‌ಸಿ), ನಲ್ಗೊಂಡ ಮತ್ತು ಭೋಂಗಿರ್ ಲೋಕಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಅದಿಲಾಬಾದ್ ಲೋಕಸಭಾ ಕ್ಷೇತ್ರದ ಐದು ವಿಧಾನಸಭಾ ಕ್ಷೇತ್ರಗಳು, ಪೆದ್ದಪಲ್ಲಿಯ ಮೂರು ಕ್ಷೇತ್ರಗಳು, ವಾರಂಗಲ್ (ಎಸ್‌ಸಿ) ಕ್ಷೇತ್ರಗಳ ಆರು, ಮಹಬೂಬಾಬಾದ್ (ಎಸ್‌ಟಿ) ಕ್ಷೇತ್ರಗಳ ಮೂರು ಮತ್ತು ಖಮ್ಮಂ ಲೋಕಸಭಾ ಕ್ಷೇತ್ರದ ಐದು ಕ್ಷೇತ್ರಗಳಲ್ಲಿಯೂ ಪರಿಷ್ಕೃತ ನಿಮಯ ಅನ್ವಯವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ರಾಜ್ಯದಲ್ಲಿ ಬಿಸಿ ಗಾಳಿ ಹೆಚ್ಚಾಗಿರುವುದರಿಂದ ಮತದಾನದ ಮೇಲಿನ ಪರಿಣಾಮ ಕುರಿತು ವಿವಿಧ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ತೆಲಂಗಾಣದ ಮುಖ್ಯ ಚುನಾವಣಾಧಿಕಾರಿಯವರ ವಿನಂತಿ ಮೇರೆಗೆ ಆಯೋಗ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಲೋಕ ಸಮರ: ಕೈಸರ್‌ಗಂಜ್‌ ಕ್ಷೇತ್ರದಿಂದ ಬ್ರಿಜ್ ಭೂಷಣ್‌ರನ್ನು ಕೈಬಿಟ್ಟು, ಮಗನನ್ನು ಕಣಕ್ಕಿಳಿಸಿದ ಬಿಜೆಪಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + seventeen =
Remember me
